ಕಂಬದಿಂದ ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರಿಗೆ ಗಾಯ: ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ದೊಡ್ಡಬಳ್ಳಾಪುರ: ಕಂಬದಿಂದ ವಿದ್ಯುತ್ ತಂತಿಬಿದ್ದು ಇಬ್ಬರು ಯುವಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ತಾಲೂಕಿನ ಕರೇನಹಳ್ಳಿ ಗುಮ್ಮಘಟ್ಟ ರಾಮಯ್ಯನ ತೋಟದ ಮುಂದು ಇಂದು ಮದ್ಯಾಹ್ನ 12 ಗಂಟೆ ಸುಮಾರಿಗೆ ನಡೆದಿದೆ.

ಇಬ್ಬರು ಗಾಯಾಳುಗಳನ್ನು ಉತ್ತರಭಾರತ ಮೂಲದ ಮಗ್ಗದ ಕಾರ್ಮಿಕರು ಎಂದು ಹೇಳಲಾಗುತ್ತಿದೆ.

ಗಾಯಾಳುಗಳನ್ನು ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ದೌಡಾಯಿಸಿದ್ದು, ಅಧಿಕಾರಿಗಳನ್ನು ಸ್ಥಳೀಯರಾದ ಜಯರಾಂ ಹಾಗು ಇತರರು ತರಾಟೆಗೆ ತೆಗೆದುಕೊಂಡಿದ್ದಾರೆ. ಗಾಯಾಳುಗಳಿಗೆ ಹಾಗು ಅವರ ಕುಟುಂಬಸ್ಥರಿಗೆ ಬೆಸ್ಕಾಂ ಅಧಿಕಾರಿಗಳು ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *