ಮಧುರೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಮೃತನಿಗೆ ಸುಮಾರು 35 ವರ್ಷ ವಯಸ್ಸು ಆಗಿರಬಹುದು ಎಂದು ಅಂದಾಜಿಸಲಾಗಿದೆ. ಹೆಸರು, ವಿಳಾಸ ಇನ್ನೂ ಪತ್ತೆಯಾಗಿರುವುದಿಲ್ಲ.
ಕೆರೆಯಲ್ಲಿ ಶವ ತೆಲಾಡುತ್ತಿರುವ ದೃಶ್ಯ ಸ್ಥಳೀಯರಿಗೆ ಕಂಡುಬಂದಿದ್ದು, ಕೂಡಲೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ದೌಡಾಯಿಸಿ ಶವವನ್ನು ದಡಕ್ಕೆ ಸೇರಿಸುವ ಪ್ರಯತ್ನದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಮೂರ್ನಾಲ್ಕು ದಿನಗಳ ಹಿಂದೆಯೇ ಕೆರೆಗೆ ಬಿದ್ದಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ…