ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ-1961 ರಡಿ ನಿಯಮಾನುಸಾರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಈಗಾಗಲೇ ನೋಂದಾಯಿತ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಸಂಬಂಧಿಸಿದ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಥವಾ https://www.ekarmika.karnataka.gov.in/ekarmika/Static/Home.aspx ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಬಹುದಾಗಿರುತ್ತದೆ.
ತಪ್ಪಿದಲ್ಲಿ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961 ರಡಿ ನಿಯಮಾನುಸಾರ ಕಾನೂನು ಕ್ರಮವಹಿಸಲಾಗುವುದು. ಹೀಗಾಗಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಗಳ ಮಾಲೀಕರು ಅಥವಾ ಉದ್ದಿಮೆದಾರರು ತಮ್ಮ ಕಾರ್ಯವ್ಯಾಪ್ತಿಯ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಆರ್ ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.