ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ-1961 ರಡಿ ನಿಯಮಾನುಸಾರ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಈಗಾಗಲೇ ನೋಂದಾಯಿತ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಸಂಬಂಧಿಸಿದ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಅಥವಾ https://www.ekarmika.karnataka.gov.in/ekarmika/Static/Home.aspx ವೆಬ್‌ ಸೈಟ್ ನಲ್ಲಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಬಹುದಾಗಿರುತ್ತದೆ.

ತಪ್ಪಿದಲ್ಲಿ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961 ರಡಿ ನಿಯಮಾನುಸಾರ ಕಾನೂನು ಕ್ರಮವಹಿಸಲಾಗುವುದು. ಹೀಗಾಗಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಗಳ ಮಾಲೀಕರು ಅಥವಾ ಉದ್ದಿಮೆದಾರರು ತಮ್ಮ ಕಾರ್ಯವ್ಯಾಪ್ತಿಯ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು‌ ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್.ಆರ್ ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

35 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago