ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲು ಅಧಿಕಾರಿಗಳು ಒತ್ತು ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಮೇಲ್ವಿಚಾರಣೆ ಸಮಿತಿ, ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ 2005-2006, ಬಾಲ್ಯ ವಿವಾಹ ನಿಷೇಧ ಸಮಿತಿ ಸಭೆ ಸೇರಿದಂತೆ ವಿವಿಧ ಸಮಿತಿ ಸಭೆಗಳ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.
ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು ಎಂದರಲ್ಲದೆ ಐ.ಸಿ.ಡಿ.ಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.
ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್ ಮಾತನಾಡಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ2005 ರಡಿ ನಿಯಮ 2006 ರ ಪ್ರಸಕ್ತ ಸಾಲಿನಲ್ಲಿ ಸಖಿ ಯೋಜನೆಯ ಅಡಿ ದಾಖಲಾದ 47 ಪ್ರಕರಣಗಳಲ್ಲಿ 39 ಪ್ರಕರಣಗಳು, ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ 133 ಪ್ರಕರಣಗಳಲ್ಲಿ 121 ಹಾಗೂ ಸಂರಕ್ಷಣಾಧಿಕಾರಿಗಳ ಹಂತದಲ್ಲಿ ದಾಖಲಾದ 08 ಪ್ರಕರಣಗಳಲ್ಲಿ 01 ಪ್ರಕರಣವು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿಜಯೇಂದ್ರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ ಶ್ರೀಕಂಠ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…