ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56 ಅಂಗನವಾಡಿ ಕಾರ್ಯಕರ್ತೆಯರು ಮತ್ತು 293 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಅಭ್ಯರ್ಥಿಗಳು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳನ್ನು ಮುಚ್ಚಿದ ಲಕೋಟೆಯಲ್ಲಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಜೂ.30ರ ಸಂಜೆ 5:30 ರೊಳಗೆ ಸಲ್ಲಿಸಬಹುದಾಗಿದೆ.

ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಹೆಚ್ಚಿನ ವಿವರಗಳಿಗಾಗಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

6 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

16 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

17 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago