ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಚೇರಿಗಳು, ಶಾಲೆಗಳು ಹಾಗೂ ಆಯಾ ಅಂಗನವಾಡಿ ಕೇಂದ್ರಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
*ಆಕ್ಷೇಪಣೆಗಳ ಸಲ್ಲಿಕೆ* ಪ್ರಕಟಿಸಲಾಗಿರುವ ತಾತ್ಕಾಲಿಕ ಆಯ್ಕೆಪಟ್ಟಿಯ ಕುರಿತಂತೆಯಾಗಲಿ ಅಥವಾ ಅಭ್ಯರ್ಥಿಗಳ ಅರ್ಹತೆಯ ಕುರಿತಾಗಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು, ಅಭ್ಯರ್ಥಿಗಳು ಸೆಪ್ಟೆಂಬರ್ 28 ರ ಸಂಜೆ 5:30 ರೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
*ಸಾರ್ವಜನಿಕರ ಗಮನಕ್ಕೆ* ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆಯುತ್ತದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಯಾರಾದರೂ ಮಧ್ಯವರ್ತಿಗಳು ಕೆಲಸ ಮಾಡಿಕೊಡುವುದಾಗಿ ನಂಬಿಸಿ ಹಣದ ಬೇಡಿಕೆ ಇಟ್ಟರೆ ಅಥವಾ ಆಮಿಷವೊಡ್ಡಿದರೆ, ಅಂತಹವರ ಮಾತುಗಳಿಗೆ ಸಾರ್ವಜನಿಕರು ಅಥವಾ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಒಳಗಾಗಬಾರದು.
ಒಂದುವೇಳೆ ಅಂತಹ ಮಧ್ಯವರ್ತಿಗಳ ಬಗ್ಗೆ ಮಾಹಿತಿ ದೊರೆತರೆ, ಕೂಡಲೇ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ, ಉಪ ನಿರ್ದೇಶಕರಿಗೆ ಅಥವಾ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ ಮಾಹಿತಿ ತಿಳಿಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…