ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 16 ರ ಸಂಜೆ 5.30 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ನೆಲಮಂಗಲ ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹೆಚ್. ಹೊನ್ನದಾಸೇಗೌಡ ಬಿಲ್ಡಿಂಗ್, ಎನ್.ಹೆಚ್ 4, ಸೊಂಡೆಕೊಪ್ಪ ಬೈಪಾಸ್, ಪರ್ವತಪ್ಪ ಲೇಔಟ್, ನೆಲಮಂಗಲ ಇಲ್ಲಿ ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!