Categories: ಕೋಲಾರ

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥಗಳ ಪೂರೈಕೆ ಆರೋಪ: ಪೊರೈಕೆ ಮಾಡುವವರ ವಿರುದ್ಧ ಕ್ರಮಕ್ಕೆ ಸಿದ್ಧ- ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಕಳಪೆಯಾಗಿರುವುದರ ಬಗ್ಗೆ ಗಮನಕ್ಕೆ ತಂದಿದ್ದು ಇಂತಹ ಆಹಾರ ಪದಾರ್ಥಗಳನ್ನು ಪೊರೈಕೆ ಮಾಡುವವರ ವಿರುದ್ಧ ಕ್ರಮಕೈಗೊಂಡು ಸರ್ಕಾರದೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಗೆ ಅಧ್ಯತೆ ನೀಡಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್‌ ಫೋನ್, ಮೆಡಿಕಲ್ ಕಿಟ್, ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಪಾಸ್ ಬುಕ್ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಗಮನಕ್ಕೆ ಬಂದಾಗ ಮಾತ್ರವೇ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ಕೂಡಲೇ ಗಮನಕ್ಕೆ ತನ್ನಿ ಶಾಸಕರೊಂದಿಗೆ ನಾನು ಇದ್ದು ಸರಕಾರದ ಗಮನಕ್ಕೆ ತಂದು ಪರಿಹಾರ ಮಾಡತ್ತೇವೆ ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜೊತೆಗೆ ಹಾರೈಕೆ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತರು ಸರಕಾರದ ಪ್ರತಿಯೊಂದು ಯೋಜನೆಗಳನ್ನು ಜಾರಿ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ನೀವು ಎಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸಮಾಜಮುಖಿಯಾಗಿ ಕೆಲಸ ಮಾಡಬೇಕು. ದಿನನಿತ್ಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಾಜರಾತಿ, ಅವರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ವಿತರಣೆ, ಅಂಗನವಾಡಿಯಲ್ಲಿ ಮೂಲ ಸಮಸ್ಯೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಸರಕಾರವು ವಿತರಿಸಿದ ಸ್ಮಾಟ್ ಪೋನ್ ಮೂಲಕ ಅನೇಕ ಯೋಜನೆಗಳ ಸದುಪಯೋಗವನ್ನು ಪಡೆಯಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ಒದಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಅದರಂತೆಯೇ ಸುಮಾರು 2.50 ಕೋಟಿ ವೆಚ್ಚದಲ್ಲಿ ನಗರದಲ್ಲಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ ಅಂಗನವಾಡಿ ಕೇಂದ್ರಗಳಿಗೆ ವಿಶೇಷ ಅನುದಾನವನ್ನು ಸಹ ತರಲಾಗುತ್ತದೆ ಸರಕಾರದಿಂದ ನೀಡುವ ಪ್ರತಿಯೊಂದು ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಡಿಪಿಒ ವಿನೋದ್ ರಾಜ್, ಮಾತೃವಂದನಾ ಯೋಜನೆಯ ಜಿಲ್ಲಾ ಸಂಯೋಜಕ ವಿಶ್ವನಾಥ್, ವಿವಿಧ ಗ್ರಾಪಂ ಅಧ್ಯಕ್ಷರಾದ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಕೊಂಡರಾಜನಹಳ್ಳಿ ಮಂಜುನಾಥ್, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಅಫ್ಸರ್, ಮಲೇಷಿಯಾ ರಾಜಕುಮಾರ್, ಖಾದ್ರಿಪುರ ಬಾಬು, ಮುಂತಾದವರು ಇದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago