ಮನೆಯಲ್ಲಿ ಆಟವಾಡಿಕೊಂಡು ಕಾಲಕಳೆಯುತ್ತಿದ್ದ ಮಕ್ಕಳನ್ನು ಪೋಷಕರು ಅಂಗನವಾಡಿ ಕೇಂದ್ರಕ್ಕೆ ತಂದು ಬಿಡುತ್ತಾರೆ. ಆದರೆ, ಇಲ್ಲಿ ಮಕ್ಕಳಿಗೆ ಯಾವುದೇ ತರಹದ ಅನುಕೂಲಗಳು ಇಲ್ಲದೆ, ಪುಟ್ಟ ಕಂದಮ್ಮಗಳು ಅಂಗನವಾಡಿ ಕೇಂದ್ರದಲ್ಲಿ ಒಬ್ಬರಮೇಲೊಬ್ಬರು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು ಎಲ್ಲಿ ಎಂತೀರಾ… ಈ ಸ್ಟೋರಿ ಓದಿ…..
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಬರುವ ಮಕ್ಕಳು ರೋಗದ ಭೀತಿ ಎದುರಿಸುವಂತಾಗಿದೆ. ಅಂಗನವಾಡಿಯಲ್ಲಿ ಸೂಕ್ತ ಮೂಲ ಸೌಕರ್ಯಗಳು ಇಲ್ಲದೇ ಅವ್ಯವಸ್ಥೆ ಆಗರವಾಗಿದೆ. ಕೇಂದ್ರಕ್ಕೆ ಬರುವ ಮಕ್ಕಳಿಗೆ ಇದೊಂದು ಜೈಲಿನ ಕೋಣೆಯಂತೆ ಭಾಸವಾಗುತ್ತಿದೆ. ಏಕೆಂದರೆ ಆ ಕೇಂದ್ರವು ಮಕ್ಕಳಿಗೆ ಉಸಿರುಗಟ್ಟಿಸುವ ವಾತಾವರಣದ, ಹಂದಿಗೂಡಿನಂತಿರುವ ಬಾಡಿಗೆ ಮನೆಯೊಂದರಲ್ಲಿ ಬಾಡಿಗೆ ಸಲ್ಲಿಸುತ್ತಾ ಮಕ್ಕಳಿಗೆ ಪಾಠ ಪ್ರವಚನ ಮಾಡಲಾಗುತ್ತಿದೆ.
ಹಂದಿಗೂಡಿನಂತಿರುವ ಬಾಡಿಗೆ ಮನೆಯೊಂದರಲ್ಲಿ ಸುಮಾರು 30ಮಕ್ಕಳು ಒಬ್ಬರಮೇಲೊಬ್ಬರು ಕುಳಿತುಕೊಂಡು ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಕಳೆದ ನಾಲ್ಕೈದು ವರ್ಷಗಳಿಂದೆ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಮಾಡಲು ತೀರ್ಮಾಸಿ ಶಾಲಾ ಆವರಣದಲ್ಲಿ ಪಾಯ ಹಾಕಿ ಕಟ್ಟಡ ನಿರ್ಮಾಣ ಮಾಡಿ ಅನುದಾನ ಕೊರತೆ ಇದೆ ಎಂದು ಹೇಳಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಅರೆಬರೆ ಕೆಲಸ ಮಾಡಿ ಹಾಗೇ ಬಿಡಲಾಗಿದೆ.
ಇನ್ನೂ ಬಾಡಿಗೆ ಕಟ್ಟಡಕ್ಕೆ ಪ್ರತಿ ತಿಂಗಳ ಎರಡು ಸಾವಿರ ಹಣವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಖರ್ಚು ಮಾಡಲಾಗುತ್ತಿದೆ. ಅದೇ ಹಣವನ್ನು ಯಾವುದಾದರೂ ಬೇರೆ ಕಟ್ಟಡಕ್ಕೆ ಶಿಫ್ಟ್ ಮಾಡಿ ಖರ್ಚು ಮಾಡಲಿ ಎಂದು ಪೋಷಕರ ಅಭಿಪ್ರಾಯ.
ದನದ ಕೊಟ್ಟಿಗೆಯಂತಿರುವ ಮನೆಯನ್ನು ಬಾಡಿಗೆಗೆ ಪಡೆದು ಮಕ್ಕಳಿಗೆ ವಿದ್ಯಾಭಾಸ್ಯ ಮಾಡಲಾಗುತ್ತಿದೆ. ಮಕ್ಕಳು ಇಲ್ಲಿ ಕುಳಿತುಕೊಳ್ಳಲು, ವಿಶ್ರಾಂತಿ ಪಡೆಯಲು, ಊಟ ಮಾಡಲು ಸೂಕ್ತ ಜಾಗವಿಲ್ಲ. ಒಬ್ಬರಮೇಲೊಬ್ಬರು ಕುಳಿತುಕೊಂಡು ಪಾಠ ಕೇಳುವ ಪರಿಸ್ಥಿತಿ ಇದೆ. ಮಕ್ಕಳಿಗೆ ಏನಾದರು ಆರೋಗ್ಯದಲ್ಲಿ ಸಮಸ್ಯೆ ಉಂಟಾದರೆ ಯಾರು ಹೊಣೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಒಟ್ಟಾರೆ ಸರಕಾರ ಮಕ್ಕಳನ್ನು ಸರಕಾರಿ ಶಾಲೆಗಳತ್ತ ಮುಖ ಮಾಡಲು ಸಾಕಷ್ಟು ಸವಲತ್ತುಗಳನ್ನು ನೀಡುತ್ತಿದ್ದರೆ, ಕೆಲವು ಅಧಿಕಾರಿಗಳು ನಿರ್ಲಕ್ಷ್ಯದಿಂದ ಬಂದ ಮಕ್ಕಳು ಕೂಡ ಈಗ ಖಾಸಗಿ ಶಾಲೆಗಳತ್ತ ಮುಖಮಾಡುವಂತಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಪ್ರಕೃತಿಯ ವಾತವರಣ ಸೃಷ್ಟಿಸಿ ಮಕ್ಕಳಿಗೆ ವಿದ್ಯಾದಾನ ಮಾಡಲು ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡಬೇಕಾಗಿದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಮಕ್ಕಳಿಗೆ ಸುಸರ್ಜಿತವಾದ ಕಟ್ಟಡವನ್ನು ನಿರ್ಮಾಣ ಮಾಡಿ ಮಕ್ಕಳ ಕಲಿಕೆಗೆ, ವಿಶ್ರಾಂತಿಗೆ ಅನುವು ಮಾಡಿಕೊಡ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…