ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.
ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.
ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.
ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರು ತಮ್ಮ ವಾರ್ಡ್‌ಗಳತ್ತ ಸುಳಿದಿಲ್ಲ.
ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…