ಅಂಗನವಾಡಿ ಪಕ್ಕದಲ್ಲೇ ಕಸದ ರಾಶಿ: ಗಬ್ಬೆದ್ದು ನಾರುತ್ತಿರುವ ದೇವರಾಜನಗರ: ಕ್ಯಾರೆ ಎನ್ನದ ಜನಪ್ರತಿನಿಧಿಗಳು, ಅಧಿಕಾರಿಗಳು: ರೋಗರುಜಿನ ಭೀತಿಯಲ್ಲಿ ಮಕ್ಕಳು, ವಾರ್ಡ್ ನಿವಾಸಿಗಳು

ಸ್ವಚ್ಛ ನಗರಸಭೆ ಖ್ಯಾತಿಯ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ದೇವರಾಜನಗರ ವಾರ್ಡ್ ಕಸದ ರಾಶಿಗಳಿಂದ ಗಬ್ಬೆದು ನಾರುತ್ತಿದೆ.

ವಾರ್ಡ್ ನಲ್ಲಿರುವ ಅಂಗನವಾಡಿ ಪಕ್ಕದಲ್ಲಿ ಕಸದರಾಶಿ ಇದ್ದು, ಅಂಗನಾಡಿಗೆ ಬರುವ ಮಕ್ಕಳು ಮುಗು ಮುಚ್ಚಿಕೊಂಡು ಶಾಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

ಕಸದ ರಾಶಿ ಜೊತೆಗೆ ವಿದ್ಯುತ್ ಪರಿವರ್ತಕ ಕೂಡ ಅಂಗನವಾಡಿ ಪಕ್ಕದಲ್ಲೇ ಇದೆ. ಅದರ ಕೆಳಗೆ ಈ ಕಸದ ರಾಶಿ ಇದೆ. ಇದರಿಂದ ವಾರ್ಡ್ ನಿವಾಸಿಗಳು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.

ಕಸದ ರಾಶಿಯನ್ನು ಬಹು ದಿನಗಳಿಂದ ತೆರವುಗೊಳಿಸಿಲ್ಲವಾದ್ದರಿಂದ ತ್ಯಾಜ್ಯವು ಕೊಳೆತು ದುರ್ವಾಸನೆ ಬೀರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರ್ಡ್ ಸಂಪೂರ್ಣ ಕಸಮಯವಾಗಿದೆ. ನಗರಸಭೆ ಸ್ವಚ್ಛತಾ ಸಿಬ್ಬಂದಿ ಪ್ರತಿದಿನ ಸಮಯಕ್ಕೆ ಸರಿಯಾಗಿ ತಪ್ಪದೆ ಬಂದು ಕಸ ತೆಗದುಕೊಂಡು ಹೋದಲ್ಲಿ ಈ ಸಮಸ್ಯೆಯೇ ಇರುವುದಿಲ್ಲ. ಆದರೆ, ವಾರ್ಡ್‌ ಸದಸ್ಯರುಗಳು ಈ ಬಗ್ಗೆ ಗಮನ ಹರಿಸದೆ ಇರುವುದರಿಂದ ಕಸದ ಸಮಸ್ಯೆ ಬಿಗಡಾಯಿಸಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೊಳ್ಳೆಗಳ ಕಾಟಕ್ಕೆ ಜನ ಹೈರಾಣು: ನಗರದಲ್ಲಿ ಎರಡು ದಿನದಿಂದ ಮಳೆಯಾಗುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ. ಇದರಿಂದ ಸಾರ್ವಜನಿಕರು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸೊಳ್ಳೆ ನಿಯಂತ್ರಣ (ಫಾಗಿಂಗ್‌) ಯಂತ್ರವನ್ನು ಬಳಸದಿರುವುದರಿಂದ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾಗಿದೆ. ವಾರ್ಡ್ ತುಂಬಾ ಕಸದ ರಾಶಿ ಬಿದ್ದಿದ್ದರೂ ಕೂಡಾ ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರು ತಮ್ಮ ವಾರ್ಡ್‌ಗಳತ್ತ ಸುಳಿದಿಲ್ಲ.

ಸಹಜವಾಗಿ ವಾರ್ಡ್ ನಿವಾಸಿಗಳು ನಗರಸಭೆ ಅಧಿಕಾರಿಗಳು, ವಾರ್ಡ್‌ ಸದಸ್ಯರ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ. ಚರಂಡಿಗಳಲ್ಲಿ ಕಟ್ಟಿಕೊಂಡಿರುವ ಕಸವನ್ನು ಸ್ವಚ್ಛಗೊಳಿಸುವಂತೆ, ಘನ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವಂತೆ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 hour ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

3 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

5 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

6 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

7 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

13 hours ago