ಕೋಲಾರ: ಸಮಾಜದಲ್ಲಿ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಎಪಿಡಿ ಬೆಂಗಳೂರು ಮತ್ತು ಫೆವಾರ್ಡ್ ಕೋಲಾರ ಜಿಲ್ಲಾ ಒಕ್ಕೂಟದಿಂದ ಅವಶ್ಯಕ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸಲು ಸಿದ್ದವಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬ ರಿಗೂ ಸಿಗುವಂತಾಗಬೇಕು ಎಂದು ಎಪಿಡಿ ಸಂಸ್ಥೆಯ ರಾಜ್ಯದ ವಲಯ ವ್ಯವಸ್ಥಾಪಕ ಶ್ರೀನಿವಾಸ್ ತಿಳಿಸಿದರು.
ನಗರದ ವಿದ್ಯಾಲಯ ಸಂಹೆ ಸಭಾಂಗಣದಲ್ಲಿ ಎಪಿಡಿ ಸಂಸ್ಥೆ ಬೆಂಗಳೂರು ಹಾಗೂ ಫೆವಾರ್ಡ್ ಜಿಲ್ಲಾ ಒಕ್ಕೂಟದಿಂದ ಶನಿವಾರ ಅಂಗವಿಕಲರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು ಈ ಸಂಸ್ಥೆಗಳ ಜೊತೆಯಲ್ಲಿ ಸರ್ಕಾರಿ, ಅರೆಸರ್ಕಾರಿ ಹಾಗೂ ಸಿಎಸ್ಆರ್ ಅನುದಾನದ ಮೂಲಕ ಅಂಗವಿಕಲರಿಗೆ ಹಾಗೂ ವಿಕಲಚೇತನರಿಗೆ ಸೌಲಭ್ಯಗಳನ್ನು ಒದಗಿಸಲು ಸಂಬಂಧಿಸಿದವರನ್ನು ಮುಂದಿನ ದಿನಗಳಲ್ಲಿ ಒತ್ತಾಯಿಸಬೇಕಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಚರ್ಚೆ ನಡೆಸಿದರು.
ಅಂಗವಿಕಲರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ ಹೋಟೆಲ್, ಶಾಲಾ ಕಾಲೇಜುಗಳು, ರೈಲ್ವೆ, ಬಸ್ ನಿಲ್ದಾಣ, ಆಸ್ಪತ್ರೆ, ಪಾರ್ಕ್, ಶೌಚಾಲಯ ಸೇರಿದಂತೆ ಇತರೆ ಕಡೆಗಳಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಸಮಾಜದ ಭಾಗವಾಗಿ ಗುರುಸಿಕೊಳ್ಳುವ ಮೂಲಕ ಮುಖ್ಯವಾಹಿನಿಗೆ ಬರಲು ಬೇಕಾದ ಸೌಲಭ್ಯಗಳನ್ನು ನೀಡುವಂತೆ ಒತ್ತಾಯಿಸಬೇಕು ಇವರ ಮಧ್ಯೆ ಕೆಲಸ ಮಾಡಲು ಸ್ವಯಂ ಸೇವಕರನ್ನು ಗುರುತಿಸಲು ಚರ್ಚಿಸಲಾಯಿತು.
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…