ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಆಗ್ರಹ

ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಏ.21ರಿಂದ ಶ್ರೀರಂಗಪಟ್ಟಣದಿಂದ ಪಾದಯಾತ್ರೆ ಆರಂಭಿಸಿ ಮೈಸೂರು ನಗರದ ಜೆ.ಕೆ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಯಿತು.

ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಕಳೆದ 17 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ/ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಖಾಯಂ ಗೊಳಿಸಬೇಕು, ಖಾಯಂಗೊಳಿಸುವವರೆಗೂ ಕೂಡಲೇ ಈ ಹುದ್ದೆಗಳನ್ನು ಕನಿಷ್ಠ ವೇತನಕ್ಕೆ ಒಳಪಡಿಸಿ ಕನಿಷ್ಠ ವೇತನ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ರಾಜ್ಯದ ಎಲ್ಲಾ ಪುನರ್ವಸತಿ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಹೋರಾಟ ನಡೆಸಲಾಯಿತು.

ಏ.24ರಿಂದ ಜೆ.ಕೆ ಪಾರ್ಕ್, ಮೈಸೂರು ನಗರ ಇಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿಯವರೆಗೆ ಅಹೋ ರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಧರಣಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಮತ್ತು ರಾಜ್ಯ ಸಂಯೋಜಕರು ಒಟ್ಟಾಗಿ ಭಾಗವಹಿಸಲಿದ್ದು, ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *