ಅಂಗವಿಕಲರ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಬೇಡಿಕೆ ಈಡೇರಿಕೆಗಾಗಿ ಏ.21ರಿಂದ ಶ್ರೀರಂಗಪಟ್ಟಣದಿಂದ ಪಾದಯಾತ್ರೆ ಆರಂಭಿಸಿ ಮೈಸೂರು ನಗರದ ಜೆ.ಕೆ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಯಿತು.
ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಕಳೆದ 17 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ/ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಸೇವೆಯನ್ನು ಖಾಯಂ ಗೊಳಿಸಬೇಕು, ಖಾಯಂಗೊಳಿಸುವವರೆಗೂ ಕೂಡಲೇ ಈ ಹುದ್ದೆಗಳನ್ನು ಕನಿಷ್ಠ ವೇತನಕ್ಕೆ ಒಳಪಡಿಸಿ ಕನಿಷ್ಠ ವೇತನ ನೀಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ರಾಜ್ಯದ ಎಲ್ಲಾ ಪುನರ್ವಸತಿ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಹೋರಾಟ ನಡೆಸಲಾಯಿತು.
ಏ.24ರಿಂದ ಜೆ.ಕೆ ಪಾರ್ಕ್, ಮೈಸೂರು ನಗರ ಇಲ್ಲಿ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿಯವರೆಗೆ ಅಹೋ ರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಧರಣಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ, ನಗರ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಜಿಲ್ಲಾ ಮತ್ತು ರಾಜ್ಯ ಸಂಯೋಜಕರು ಒಟ್ಟಾಗಿ ಭಾಗವಹಿಸಲಿದ್ದು, ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…