ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು ‘ಅಧ್ಯಯನ ವೃತ್ತ’ (ಸ್ಟಡಿ ಸರ್ಕಲ್) ವತಿಯಿಂದ ಸರ್ಕಾರದಿಂದ ಅಧಿಸೂಚಿಸಲ್ಪಡುವ ವಿವಿಧ ಹುದ್ದೆಗಳ ನೇಮಕಾತಿ ಗೆ ಸಂಬಂಧಿಸಿದಂತೆ, ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಪರೀಕ್ಷಾ ಪೂರ್ವ ತರಬೇತಿ ವರ್ಗಗಳನ್ನು ಶ್ರೀ. ವಿದ್ಯಾಶೇಖರ ಇನಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ನೆಲಮಂಗಲದಲ್ಲಿ ಹಮ್ಮಿಕೊಳ್ಳಲಾಗಿದೆ.

ಫೆಬ್ರವರಿ 18 ರಿಂದ 28 ರವರೆಗೆ ತರಬೇತಿ ನೀಡಲಾಗುವುದು, ಫೆ.18 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮದೊಂದಿಗೆ ತರಬೇತಿ ವರ್ಗಗಳು ಆರಂಭಗೊಳ್ಳಲಿದ್ದು, ಆಸಕ್ತ ಅಭ್ಯರ್ಥಿಗಳು ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಛೇರಿ ಸಿ.ಓ.ಇ.ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತುಮಕೂರು ರಸ್ತೆ ಪೀಣ್ಯ, ಬೆಂಗಳೂರು-22 ಇಲ್ಲಿ ಕಚೇರಿಯ ವೇಳೆಯಲ್ಲಿ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-29752338, ಮತ್ತು 9449728545 ಸಂಪರ್ಕಿಸಿ ಅಥವಾ ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

3 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

14 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

15 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

23 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago