ಅಂಚೆ ಮೂಲಕ ಮಾದಕ ವಸ್ತು ಸಾಗಾಟ: 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳ ವಶ

ಸಿಸಿಬಿಯ ಮಾದಕದ್ರವ್ಯ ನಿಗ್ರಹ ವಿಭಾಗ ಹಾಗೂ ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಚೆ ಮೂಲಕ ಸಾಗಿಸುತ್ತಿದ್ದ ಮಾದಕ ವಸ್ತುಗಳನ್ನು ಪತ್ತೆಹಚ್ಚಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಶ್ವಾನದಳದ ನೆರವಿನೊಂದಿಗೆ ಈ ತಂಡವನ್ನು ಪತ್ತೆಹಚ್ಚಲಾಗಿದೆ. ಕಾರ್ಯಾಚರಣೆಯಲ್ಲಿ 3500 ಪಾರ್ಸಲ್ ಗಳನ್ನು ಪತ್ತೆಹಚ್ಚಲಾಗಿದೆ. ಅದರಲ್ಲಿ 21,17,34,000 ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯಗಳು 606 ಪಾರ್ಸಲ್ ಗಳಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು.

ಪೋರ್ಟರ್ ಆಪ್ ಮೂಲಕ ಗ್ರಾಹಕರ ಹಾಗೂ ಚಾಲಕರ ನಕಲಿ ಗುರುತಿನ ಚೀಟಿ ಸೃಷ್ಟಿ ಮಾಡುತ್ತಿದ್ದ ಆರೋಪದ ಮೇಲೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಈ ನಕಲಿ ಗುರುತಿನ ಚೀಟಿ ಬಳಸಿಕೊಂಡು ನಕಲಿ ಆರ್ಡರ್ ಬುಕ್ ಮಾಡುತ್ತಿದ್ದರು. ಕಂಪನಿಗಳು ಈ ನಕಲಿ ಚಾಲಕರಿಗೆ ಹಣ ಪಾವತಿ ಮಾಡುತ್ತಿತ್ತು. ನಂತರ ಈ ಆರ್ಡರ್ ಗಳನ್ನು ರದ್ದುಗೊಳಿಸಿದ ನಂತರ ಕಂಪನಿಯು ನಕಲಿ ಗ್ರಾಹಕರಿಗೂ ಹಣ ಮರುಪಾವತಿ ಮಾಡುತ್ತಿತ್ತು. ಕಳೆದ 8 ತಿಂಗಳಲ್ಲಿ ಈ ರೀತಿಯಾಗಿ ಕಂಪನಿಗೆ 90 ಲಕ್ಷ ವಂಚನೆ ಮಾಡಲಾಗಿದೆ ಎಂದರು.

ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಹುಸಿ ಬಾಂಬ್ ಕರೆ ಹಾಗೂ ಇಮೇಲ್ ಗಳನ್ನು ಕಳುಹಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿವಿ ಪುರಂ ಪೊಲೀಸ್ ಠಾಣೆ ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಮಾದರಿಯ 10 ಪ್ರಕರಣಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಎಂದು ಹೇಳಿದರು.

ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಲಯದ ಸಿಇಎನ್ ಪೊಲೀಸ್ ಠಾಣೆ ಅಧಿಕಾರಿಗಳು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಹಣ ದುಪ್ಪಟ್ಟು ಮಾಡುವ ಆಮೀಷ ಒಡ್ಡಿ ಯಾಮಾರಿಸುತ್ತಿದ್ದರು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರ ಆರೋಪಿಗಳ ಹುಡುಕಾಟ ನಡೆಸಲಾಗುತ್ತಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

  ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು.…

48 minutes ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

3 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

4 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

17 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

18 hours ago