ತಾಲ್ಲೂಕಿನ ಮೋಪರಹಳ್ಳಿಯ ಜನ, ಜಾನುವಾರುಗಳು, ಶಾಲಾಮಕ್ಕಳು ಸುಗಮವಾಗಿ ಚಲಿಸಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಬೇಕು ಎಂದು ಮೋಪರಹಳ್ಳಿಯಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೊಸಕೋಟೆಯಿಂದ ದಾಬಸ್ ಪೇಟೆ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ರಸ್ತೆಯ ಕಾಮಗಾರಿಯು ಮೋಪರಹಳ್ಳಿಯಲ್ಲಿ ನಡೆಸಲಾಗುತ್ತಿದೆ. ಮೋಪರಹಳ್ಳಿಯಲ್ಲಿ ಇರುವ ಶಾಲೆಗೆ ಶಾಲಾ ಮಕ್ಕಳು ಶಾಲೆಗೆ ಬರಲು, ಶಾಲೆಗೆ ಹೋಗಲು ಮತ್ತು ರೈತರು, ಜನ ಜಾನುವಾರುಗಳು ಪಕ್ಕದ ಜಮೀನುಗಳಿಗೆ ಸುಗಮವಾಗಿ ಹೋಗಲು ಕಷ್ಟವಾಗುತ್ತಿರುವುದಲ್ಲದೇ ಈ ರಸ್ತೆಯಲ್ಲಿ ಅಪಘಾತಗಳು ಆಗುತ್ತಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಅಂಡರ್ ಪಾಸ್ ರಸ್ತೆಯನ್ನು ಮಾಡಿಸಿ ಶಾಲಾ ಮಕ್ಕಳಿಗೆ, ರೈತರಿಗೆ, ಜನ ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೋಪರಹಳ್ಳಿ ಗ್ರಾಮಸ್ಥರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮೋಪರಹಳ್ಳಿ ಗ್ರಾಮಸ್ಥರಾದ ರವಿಕುಮಾರ್, ಎಂ.ಪಿ ನಾಗರಾಜ್, ಮುನಿಆಂಜಿನಪ್ಪ, ಸುರೇಶ, ವೆಂಕಟೇಶ್, ರಾಮಪ್ಪ, ಹನುಮಂತಗೌಡ, ರಾಮಾಂಜಿನಪ್ಪ, ಆನಂದ, ಮುನಿರಾಜ, ನಾಗೇಶ, ಚನ್ನಕೃಷ್ಣ, ಮಾರಪ್ಪ, ಮುರಳಿ ಎಂ.ಹನುಮಂತಗೌಡ, ರಾಮಾಂಜಿನಪ್ಪ, ಗಂಗರಾಜ, ರಮೇಶ, ನಾರಾಯಣಪ್ಪ, ಮುನಿಆಂಜಿನಪ್ಪ, ಆಂಜಿನಪ್ಪ, ರಮೇಶ್, ಹನುಮರಾಜ, ಹರೀಶ, ರಾಮಾಂಜಿನಪ್ಪ, ಮತ್ತಿತರರು ಹಾಜರಿದ್ದರು.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…