ಅಂತರರಾಜ್ಯ ಗಾಂಜಾ ಮಾರಾಟ ಜಾಲ ಪತ್ತೆ: ಮೂವರ ಬಂಧನ: 7 ಲಕ್ಷ ರೂ. ಮೌಲ್ಯದ ಗಾಂಜಾ, ಬೈಕ್ ವಶ

ದೊಡ್ಡಬಳ್ಳಾಪುರ: ಖಾಸಗಿ ಕಾಲೇಜಿನ ಸಮೀಪದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 5 ಕೆ.ಜಿ. 670 ಗ್ರಾಂ ಗಾಂಜಾ, ಅಂದಾಜು 6 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಹಾಗೂ ಸುಮಾರು 1 ಲಕ್ಷ ರೂ. ಮೌಲ್ಯದ ಪ್ಯಾಷನ್ ಪ್ರೊ ಬೈಕ್ ವಶಪಡಿಸಿಕೊಳ್ಳಲಾಗಿದೆ. ಒಟ್ಟು ಸುಮಾರು 7 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಯಲಹಂಕ ತಾಲ್ಲೂಕಿನ ಸಾದೇನಹಳ್ಳಿ ಗ್ರಾಮದ ಸುರೇಶ್ (34), ದೊಡ್ಡಬಳ್ಳಾಪುರ ಕಸಬಾ ಹೋಬಳಿಯ ರಾಜೀವ್‌ಗಾಂಧಿ ಕಾಲೋನಿ ನಿವಾಸಿ ರೋಹಿತ್ ಕುಮಾರ್ (25) ಹಾಗೂ ಗಂಗಾಧರಪುರ ನಿವಾಸಿ ರೂಪೇಶ್ ಕುಮಾರ್ ಮಂಡಲ್ (30) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಆರೋಪಿಗಳು ಬಿಹಾರ ಹಾಗೂ ಜಾರ್ಖಂಡ್ ಮೂಲದವರಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಗಾರೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಗಾಂಜಾ ಎಲ್ಲಿಂದ ತರಲಾಗಿತ್ತು ಮತ್ತು ಯಾರಿಗೆ ಮಾರಾಟ ಮಾಡಲು ಉದ್ದೇಶಿಸಲಾಗಿತ್ತು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 446/2026ರಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಎಂ.ವಿ. ಚಂದ್ರಕಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ ಪ್ರಸನ್ನ ಹಾಗೂ ಲಕ್ಷ್ಮೀನಾರಾಯಣ, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್‌ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ಪಿಎಸ್‌ಐ ನಾರಾಯಣಸ್ವಾಮಿ, ಪ್ರೊಬೇಷನರಿ ಪಿಎಸ್‌ಐಗಳಾದ ವಿನಾಯಕ ಪಾಟೀಲ್ ಹಾಗೂ ನಾಗರಾಜು, ಎಎಸ್‌ಐ ರಾಧಾಕೃಷ್ಣ, ಹೆಡ್ ಕಾನ್‌ಸ್ಟೆಬಲ್‌ಗಳಾದ ರಂಗನಾಥ್, ಸುನಿಲ್ ಭಾಸಗಿ, ಮಂಜುನಾಥ್, ಚಂದ್ರಶೇಖರ್, ಎಹೆಚ್‌ಸಿ ನಟರಾಜು, ಪಿಸಿ ಪ್ರವೀಣ್ ಹಾಗೂ ತಾಂತ್ರಿಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ತಂಡದ ಕಾರ್ಯವನ್ನು ಎಸ್‌ಪಿ ಎಂ.ವಿ. ಚಂದ್ರಕಾಂತ್ ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

11 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

17 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

18 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

24 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago