ಅಂತಾರಾಜ್ಯ ಮನೆಗಳ್ಳರ ಬಂಧನ: ₹11.42 ಲಕ್ಷ ಮೌಲ್ಯದ ಕಳವು ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹11.42 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಜೂನ್ 15ರಂದು ಸರಳಾ ಚಂದ್ರಶೇಖರ್ ಅವರು ತಮ್ಮ ಮನೆಯಲ್ಲಿ ಚಿನ್ನದ ಮಾಂಗಲ್ಯ ಸರ, ನೆಕ್‌ಲೇಸ್, ನಗದು ಹಣ ಹಾಗೂ ಬೈಕ್ ಕಳುವಾಗಿರುವ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಎಂ.ವಿ. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ ಪ್ರಸನ್ನ, ಲಕ್ಷ್ಮೀನಾರಾಯಣ ಎ.ವಿ. ಹಾಗೂ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಬಿಹಾರದ ಖಾಗರಿಯಾ ಜಿಲ್ಲೆಯ ಗೋಗರಿ ತಾಲ್ಲೂಕಿನ ಕಾಜಿಚಾಕ್ ಗ್ರಾಮದ ನಿವಾಸಿಗಳಾದ ಗೌರವ್ ಕುಮಾರ್ (19) ಹಾಗೂ ವಿಶಾಲ್ ಕುಮಾರ್ (22) ಅವರನ್ನು ಬಂಧಿಸಿದೆ.

ಬಂಧಿತರಿಂದ ₹9.75 ಲಕ್ಷ ಮೌಲ್ಯದ 85 ಗ್ರಾಂ ಚಿನ್ನಾಭರಣ, ₹67 ಸಾವಿರ ನಗದು ಹಣ ಹಾಗೂ ಸುಮಾರು ₹1 ಲಕ್ಷ ಮೌಲ್ಯದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ₹11.42 ಲಕ್ಷ ಮೌಲ್ಯದ ಕಳವು ಮಾಲು ಪತ್ತೆಹಚ್ಚಿ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ನಾರಾಯಣಸ್ವಾಮಿ, ಪ್ರೊಬೆಷನರಿ ಪಿಎಸ್‌ಐ ಸುಮಂತ್, ಹೆಡ್ ಕಾನ್ಸ್‌ಟೇಬಲ್‌ಗಳಾದ ರಂಗನಾಥ್, ಸುನಿಲ್ ಭಾಸಗಿ, ಹರೀಶ್, ಮಂಜುನಾಥ್, ಚಂದ್ರಶೇಖರ್, ಸಹಾಯಕ ಹೆಡ್ ಕಾನ್ಸ್‌ಟೇಬಲ್ ನಟರಾಜು, ಪೊಲೀಸ್ ಕಾನ್ಸ್‌ಟೇಬಲ್ ಸಚಿನ್ ಉಪ್ಪಾರ ಹಾಗೂ ತಾಂತ್ರಿಕ ಸಿಬ್ಬಂದಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಪ್ರಕರಣದ ಯಶಸ್ವಿ ತನಿಖೆ ಮತ್ತು ಕಳವು ಮಾಲು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

7 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

8 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

20 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

20 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

21 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago