ಯೂತ್ ಗೇಮ್ಸ್ ಕೌನ್ಸಿಲ್ ಇಂಡಿಯಾ ವತಿಯಿಂದ ನೇಪಾಳದ ರಂಗಸಾಲ ಕ್ರೀಡಾಂಗಣ ಪೋಕರಾದಲ್ಲಿ 2022 -2023ನೆ ಸಾಲಿನ ಅಂತರರಾಷ್ಟ್ರೀಯ ಕ್ರೀಡಾಕೂಟ ನಡೆಯಿತು.
ಈ ಕ್ರೀಡಾಕೂಟದಲ್ಲಿ 3 ಸಾವಿರ ಮತ್ತು 5 ಸಾವಿರ ಮೀಟರ್ ಓಟದ ವಿಭಾಗದಲ್ಲಿ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿ ಲಿಖಿಶ್ .ವಿ ಎರಡು ಚಿನ್ನದ ಪದಕಗಳನ್ನು ಪಡೆದು ಸೌತ್ ಏಷಿಯನ್ ಯೂತ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ.
ಯೂತ್ ಗೇಮ್ಸ್ ಇಂಡೋ ನೇಪಾಳ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಎರಡು ಚಿನ್ನದ ಪದಕ ಪಡೆದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ
ಈ ಸಾಧಕ ವಿದ್ಯಾರ್ಥಿಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಿ.ಎಚ್ ನಾಗರಾಜ್, ಉಪಾಧ್ಯಕ್ಷರಾದ ಜೆ. ರಾಜೇಂದ್ರ, ಆಡಳಿತ ಮಂಡಳಿಯ ನಿರ್ದೇಶಕರುಗಳು, ಎಚ್.ಆರ್ ಮ್ಯಾನೇಜರ್ ಬಾಬುರೆಡ್ಡಿ , ಸೇರಿದಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ.ನಾಗರಾಜ್, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ. ಉಪಪ್ರಾಂಶುಪಾಲರಾದ ಕೆ. ದಕ್ಷಿಣಮೂರ್ತಿ ಸೇರಿದಂತೆ
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…