ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿ.ಲಿಖಿಶ್ ಗೆ ಎರಡು ಚಿನ್ನದ ಪದಕ; ಸೌತ್ ಏಷಿಯನ್ ಯೂತ್ ಗೇಮ್ಸ್ ಗೆ ಆಯ್ಕೆ

ಯೂತ್ ಗೇಮ್ಸ್ ಕೌನ್ಸಿಲ್ ಇಂಡಿಯಾ ವತಿಯಿಂದ ನೇಪಾಳದ ರಂಗಸಾಲ ಕ್ರೀಡಾಂಗಣ ಪೋಕರಾದಲ್ಲಿ 2022 -2023ನೆ ಸಾಲಿನ ಅಂತರರಾಷ್ಟ್ರೀಯ ಕ್ರೀಡಾಕೂಟ ನಡೆಯಿತು.

ಈ ಕ್ರೀಡಾಕೂಟದಲ್ಲಿ 3 ಸಾವಿರ ಮತ್ತು 5 ಸಾವಿರ ಮೀಟರ್ ಓಟದ ವಿಭಾಗದಲ್ಲಿ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿ ಲಿಖಿಶ್ .ವಿ ಎರಡು ಚಿನ್ನದ ಪದಕಗಳನ್ನು ಪಡೆದು ಸೌತ್ ಏಷಿಯನ್ ಯೂತ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ.

ಯೂತ್ ಗೇಮ್ಸ್ ಇಂಡೋ ನೇಪಾಳ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಎರಡು ಚಿನ್ನದ ಪದಕ ಪಡೆದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ
ಈ ಸಾಧಕ ವಿದ್ಯಾರ್ಥಿಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಿ.ಎಚ್ ನಾಗರಾಜ್, ಉಪಾಧ್ಯಕ್ಷರಾದ ಜೆ. ರಾಜೇಂದ್ರ, ಆಡಳಿತ ಮಂಡಳಿಯ ನಿರ್ದೇಶಕರುಗಳು, ಎಚ್.ಆರ್ ಮ್ಯಾನೇಜರ್ ಬಾಬುರೆಡ್ಡಿ , ಸೇರಿದಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ.ನಾಗರಾಜ್,  ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ. ಉಪಪ್ರಾಂಶುಪಾಲರಾದ ಕೆ. ದಕ್ಷಿಣಮೂರ್ತಿ ಸೇರಿದಂತೆ
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

48 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 hour ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

3 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago