ನಾಸಾದ ‘ಕ್ರ್ಯೂ–10’ ಮಿಷನ್‌ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಸುರಕ್ಷಿತವಾಗಿ ತಲುಪಿದ್ದಾರೆ.
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.
ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್) ಕರೆತರಲು ಕ್ರ್ಯೂ–10 ಮಿಷನ್‌ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.
ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್‌ಎಸ್‌ಗೆ ತೆರಳಿದ್ದರು.
ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್ ಅವರ ಜೊತೆಗೆ ಐಎಸ್‌ಎಸ್‌ನಲ್ಲಿರುವ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್ 19ರಂದು ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.
ಸುನಿತಾ ಹಾಗೂ ವಿಲ್ಮೋರ್ ಅವರು ಕಳೆದ ವರ್ಷ ಜೂನ್ 5ರಂದು, ಬೋಯಿಂಗ್ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…