Categories: ವಿಜ್ಞಾನ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಯಶಸ್ವಿಯಾಗಿ ತಲುಪಿದ ಗಗನಯಾತ್ರಿಗಳು: ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿ ಸುಗಮ

 

ನಾಸಾದ ‘ಕ್ರ್ಯೂ–10’ ಮಿಷನ್‌ನ ನಾಲ್ವರು ಗಗನಯಾತ್ರಿಗಳು ಭಾನುವಾರ ಬೆಳಿಗ್ಗೆ NASA-SpaceX Crew-10 ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಸುರಕ್ಷಿತವಾಗಿ ತಲುಪಿದ್ದಾರೆ.

ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರ ಭೂಮಿಗೆ ಬರುವ ಹಾದಿಯನ್ನು ಸುಗಮಗೊಳಿಸಿದ್ದಾರೆ.

ಸರಿಸುಮಾರು 9 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿಯನ್ನು(ಸುನಿತಾ ಮತ್ತು ಬುಚ್‌) ಕರೆತರಲು ಕ್ರ್ಯೂ–10 ಮಿಷನ್‌ಅನ್ನು ನಾಸಾ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿತ್ತು.

ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್ ಗಗನನೌಕೆಯಲ್ಲಿ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಐಎಸ್‌ಎಸ್‌ಗೆ ತೆರಳಿದ್ದರು.

ಗಗನನೌಕೆಯು ಮರಳುವಾಗ ಸುನಿತಾ ಮತ್ತು ಬುಚ್‌ ಅವರ ಜೊತೆಗೆ ಐಎಸ್‌ಎಸ್‌ನಲ್ಲಿರುವ ನಿಕ್‌ ಹೇಗ್‌ ಮತ್ತು ಅಲೆಕ್ಸಾಂಡರ್‌ ಗೊರ್ಬನೊವ್ ಅವರನ್ನೂ ಕರೆತರಲಿದೆ. ಮಾರ್ಚ್‌ 19ರಂದು ‘ಕ್ರ್ಯೂ–9’ ಮಿಷನ್‌ನ ಸಿಬ್ಬಂದಿ ಭೂಮಿಗೆ ಬರುವ ಸಾಧ್ಯತೆಯಿದೆ.

ಸುನಿತಾ ಹಾಗೂ ವಿಲ್ಮೋರ್‌ ಅವರು ಕಳೆದ ವರ್ಷ ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

8 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

18 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago