ಚೆನ್ನೈನಲ್ಲಿ ನಡೆದ ಅಂತರ್ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ B.com ವಿದ್ಯಾರ್ಥಿ ಕೆ.ಎಸ್.ಮನೋಜ್ ಕುಮಾರ್ ಭಾಗವಹಿಸಿ 4ನೇಯ ಸ್ಥಾನ ಪಡೆದಿದ್ದಾರೆ.
ಈ ಹಿನ್ನೆಲೆ ಹಳೇ ವಿದ್ಯಾರ್ಥಿಗಳ ಸಂಘದಿಂದ ಕೆ.ಎಸ್.ಮನೋಜ್ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಹೆಚ್.ವಿ.ಪ್ರವೀಣ್ ಕುಮಾರ್ ರವರು ಸಂಘದಿಂದ ಪ್ರೋತ್ಸಹ ಹಣದ ಚೆಕ್ ನೀಡುವ ಮೂಲಕ ಉತ್ತೇಜಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಪಾಠದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಉತ್ತಮ ಪ್ರದರ್ಶನವನ್ನು ನೀಡಬೇಕು. ನಮ್ಮ ಸಂಘದಿಂದ ಮುಂದೆಯೂ ಆರ್ಥಿಕವಾಗಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಂಘವು ಸದಾ ಕಾಲ ತಮ್ಮ ಜೊತೆ ಇರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸದಾಶಿವ ರಾಮಚಂದ್ರ ಗೌಡ, ಪ್ರಾಧ್ಯಾಪಕರಾದ ಶ್ರೀನಿವಾಸ್, ಹಳೇ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾದ ಎಸ್.ಮಮತಾ, ಖಜಾಂಜಿ ಮಹೇಶ್, ನಿರ್ದೇಶಕರಾದ ರಾಜೇಂದ್ರ ಉಪಸ್ಥಿತರಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…