ದೇವನಹಳ್ಳಿ ತಾಲೂಕಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಕೆಂಪೇಗೌಡ ಸರ್ಕಲ್ ಬಳಿ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ 2 ಕಾರು ಹಾಗೂ ಆಟೋ ಮತ್ತು ಟಾಟಾ ಏಸ್ ಸಂಪೂರ್ಣ ಜಖಂಗೊಂಡಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದಿಂದ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಬಿಸಿ ಎದುರಿಸಿದ ವಾಹನ ಸವಾರರು.ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಪಘಾತಕ್ಕೊಳಗಾದ ಕಾರುಗಳು ಹಾಗೂ ಆಟೋ ತೆರವುಗೊಳಿಸಿದರು. ನಂತರ ವಾಹನ ದಟ್ಟಣೆ ನಿಯಂತ್ರಣ ಮಾಡಿದರು.