Categories: ಲೇಖನ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ರೈತ ಮಕ್ಕಳು…

ಇನ್ನಷ್ಟು ಬಹುದೊಡ್ಡ ವಿಮಾನ ನಿಲ್ದಾಣಗಳ ನಿರ್ಮಾಣದ ಯೋಜನೆಗಳ ಹೊಸ್ತಿಲಿನಲ್ಲಿ……….

ಭೂಮಿಯ ಮೇಲೆ ನಡೆಯುವುದು, ನೀರಿನ ಮೇಲೆ ತೇಲುವುದು, ಆಕಾಶದಲ್ಲಿ ಗಾಳಿಯಲ್ಲಿ ಹಾರಾಡುವುದು ಮನುಷ್ಯನ ಕುತೂಹಲದ ಪ್ರಯಾಣದ ಕನಸುಗಳಲ್ಲಿ ಮುಖ್ಯವಾದವು.

ರಸ್ತೆ ಹೊರತುಪಡಿಸಿ ನೀರು ಮತ್ತು ಗಾಳಿಯಲ್ಲಿ ಸಂಚರಿಸುವುದು ತುಂಬಾ ದುಬಾರಿಯಾದುದು. ಆಧುನಿಕ ಕಾಲದಲ್ಲಿ ವಿಮಾನ ಸಂಚಾರ ತುಂಬಾ ಸುಲಭವಾಗಿದೆ. ಆದರೆ ಅದು ಶ್ರೀಮಂತರ ಪ್ರಯಾಣ ವ್ಯವಸ್ಥೆ ಎಂಬುದು ಮಾತ್ರ ಸತ್ಯ. ಏಕೆಂದರೆ ಭಾರತದಲ್ಲಿ ಕೇವಲ ‌3/5% ಶೇಕಡಾ ಜನರು ಮಾತ್ರ ವಿಮಾನಗಳಲ್ಲಿ ಪ್ರಯಾಣಿಸುತ್ತಾರೆ. ಆದರೆ ಅದಕ್ಕಾಗಿ ವ್ಯಯಿಸುವ ಸಮಯ, ಹಣ, ಭೂಮಿ ಮುಂತಾದ ಸಂಪನ್ಮೂಲಗಳು ಮಾತ್ರ ಅತಿಹೆಚ್ಚು. ಅಂದರೆ ಕೇವಲ ಕೆಲವೇ ಜನರ ಹಿತಕ್ಕಾಗಿ ತುಂಬಾ ಶ್ರಮ ಪಡಬೇಕಾಗುತ್ತದೆ….

ಇಲ್ಲಿ ಮುಖ್ಯವಾಗಿ ರೈತ ಮಕ್ಕಳು ನೆನಪಾಗಲು ಕಾರಣ…….

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಇದ್ದ ಜಾಗ ಕೆಲವು ವರ್ಷಗಳ ಹಿಂದೆ ರೈತರ ಒಡೆತನದಲ್ಲಿತ್ತು. ಒಂದಷ್ಟು ಕೃಷಿ ಭೂಮಿ ಮತ್ತೊಂದಷ್ಟು ಕುರುಚಲು ಗಿಡಗಳ ಪಾಳು ಭೂಮಿ.

ವಿಮಾನ ನಿಲ್ದಾಣ ಮಾಡುವ ನಿರ್ಧಾರದ ನಂತರ ಆ ಜಾಗವನ್ನು ರೈತರಿಂದ ವಶಪಡಿಸಿಕೊಂಡು ಅದಕ್ಕೆ ಉತ್ತಮ ಪರಿಹಾರದ ಮೊತ್ತವನ್ನು ಅವರಿಗೆ ಕೊಡಲಾಯಿತು ಮತ್ತು ಅಲ್ಲಿನ ಸುತ್ತಮುತ್ತಲಿನ ಜಮೀನಿನ ಬೆಲೆ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾಗಿ ಸಾಕಷ್ಟು ಹಣವಂತರು ಅದನ್ನು ರೈತರಿಂದ ಖರೀದಿಸಿದರು. ರಿಯಲ್ ಎಸ್ಟೇಟ್ ಒಂದು ದೊಡ್ಡ ಉದ್ಯಮ ಮತ್ತು ದಂಧೆಯಾಯಿತು……

ಸುಮಾರು ‌15/20 ವರ್ಷಗಳ ನಂತರ……….

ಯಾವ ರೈತರ ಜಮೀನನ್ನು ಸರ್ಕಾರ ವಶಪಡಿಸಿಕೊಂಡು ಹಣ ನೀಡಿತೋ, ಯಾವ ರೈತರು ಹಣದ ಆಸೆಗಾಗಿ ಅಥವಾ ಬದುಕಿನ ಅನಿವಾರ್ಯತೆಗಾಗಿ ತಮ್ಮ ಹೊಲ ಗದ್ದೆಗಳನ್ನು ಮಾರಿಕೊಂಡರೋ ಅವರಲ್ಲಿ ಬಹುಶಃ ಶೇಕಡಾ 70% ಕ್ಕೂ ಹೆಚ್ಚು ಜನರ ಬಳಿ ಜಮೀನೂ ಇಲ್ಲ ಅಥವಾ ಆಗ ಗಳಿಸಿದ ಹಣವೂ ಇಲ್ಲ. ಅವರಲ್ಲಿ ಬಹುತೇಕರು ಅದೇ ವಿಮಾನ ನಿಲ್ದಾಣ ಮತ್ತು ಅಲ್ಲಿನ ಸುತ್ತಮುತ್ತಲಿನ ವ್ಯಾಪಾರ ಕೇಂದ್ರಗಳಲ್ಲಿ ಕೆಲಸಗಾರರಾಗಿ ದುಡಿಯುತ್ತಿದ್ದಾರೆ. ಕೆಲವರು ಮಾತ್ರ ಬಂದ ಹಣವನ್ನು ಸದುಪಯೋಗ ಪಡಿಸಿಕೊಂಡು ಮೊದಲಿಗಿಂತ ಉತ್ತಮ ಗುಣಮಟ್ಟ ಜೀವನ ನಡೆಸುತ್ತಿದ್ದಾರೆ….

ನಿಜವಾದ ಚಿಂತನೆ ಮತ್ತು ಅಧ್ಯಯನದ ಅವಶ್ಯಕತೆ ಇರುವುದು ಇಲ್ಲಿಯೇ……

ಇದು ನಾಗರಿಕ ಸಮಾಜದ ಸಹಜ ಗುಣ. ಸಾಮರ್ಥ್ಯ ಇರುವವರು, ಬುದ್ದಿವಂತರು, ಎಲ್ಲಾ ರೀತಿಯ ಶ್ರಮಜೀವಿಗಳು ಪರಿಸ್ಥಿತಿಯನ್ನು ಬೇಗ ಅರ್ಥಮಾಡಿಕೊಂಡು ದೂರದೃಷ್ಟಿಯಿಂದ ಅದರ ಲಾಭ ಪಡೆದು ಶ್ರೀಮಂತರಾಗಿ ಬದುಕುತ್ತಾರೆ, ಇದು ಸರಿ ಎನ್ನುವ ಬಲಪಂಥೀಯ ವಾದ…..

ಅಥವಾ….

ಸಾಮಾಜಿಕ ಅಸಮಾನತೆ, ಸಂಕೀರ್ಣ ಜಾತಿ ವ್ಯವಸ್ಥೆಯ ಅಮಾನವೀಯತೆ, ದುರ್ಬಲರ‌‌ ಶೋಷಣೆ, ಹಣ ಅಧಿಕಾರ ಶಕ್ತಿ ಇರುವವರು ತಮ್ಮದೇ ಸಮುದಾಯಗಳನ್ನು ಧರ್ಮ ಅಥವಾ ಕಾನೂನು ಅಥವಾ ಸಂಪ್ರದಾಯದ ಹೆಸರಿನಲ್ಲಿ ವಂಚಿಸಿ ತಮ್ಮ ಸುಖಕ್ಕಾಗಿ ಈ ಜನರ ದೌರ್ಬಲ್ಯವನ್ನು ದುರುಪಯೋಗ ಪಡಿಸಿಕೊಳ್ಳುವರು ಎನ್ನುವ ಎಡಪಂಥೀಯ ವಾದ…..

ಈ ಎಡ ಬಲ ವಾದಗಳ ಜೊತೆಗೆ ಅಂಬೇಡ್ಕರ್ ಬಸವಣ್ಣ ಗಾಂಧಿ ಲೋಹಿಯಾ ಮುಂತಾದವರ ಚಿಂತನೆಗಳು ಸಹ ಇಲ್ಲಿ ಒಂದಷ್ಟು ಪ್ರಸ್ತುತವಾಗುತ್ತದೆ.

ಹಾಗಾದರೆ ಅಭಿವೃದ್ಧಿಯ ಮಾನದಂಡ ಯಾವುದು ?….

ವಿಮಾನ ನಿಲ್ದಾಣಗಳ ಶ್ರೀಮಂತಿಕೆಯೇ ಅಥವಾ ರೈತ ಮಕ್ಕಳ ದುರ್ಗತಿಯೇ ?

ಹಣವೇ ಪ್ರಧಾನವಾದ ಸಮಾಜದಲ್ಲಿ ಇದರ ಬಗ್ಗೆ ಚಿಂತನೆಗೆ ಸಮಯವೂ ಸಿಗುತ್ತಿಲ್ಲ. ಕೆಲವರ ಬದುಕು ವಿಮಾನಗಳ ಹಾರಾಟದಂತೆ ವೇಗವಾಗಿ ಗಾಳಿಯಲ್ಲಿ ಹಾರಾಡುತ್ತಾ ಸಾಗುತ್ತಿದ್ದರೆ ಮತ್ತೆ ಕೆಲವರ ಬದುಕು ಜಟಕಾ ಬಂಡಿ………

ಎರಡರ ನಡುವೆ ಸಮನ್ವಯ ಸಾಧಿಸಬೇಕಾಗಿದ್ದ ಸರ್ಕಾರಗಳು ಕುರ್ಚಿಯ ಸುತ್ತ ಸುತ್ತುತ್ತಾ ತಮ್ಮ ಹಿತಾಸಕ್ತಿಗಳನ್ನು ಮಾತ್ರ ಕಾಯ್ದುಕೊಂಡಿವೆ……

ಇತ್ತೀಚೆಗೆ ಮತ್ತಷ್ಟು ವಿಮಾನ ನಿಲ್ದಾಣಗಳ ಸ್ಥಾಪನೆಗಾಗಿ ನಡೆಯುತ್ತಿರುವ ಪ್ರಯತ್ನಗಳ ಹಿನ್ನೆಲೆಯಲ್ಲಿ…….

ಈಗ ಯೋಚಿಸಬೇಕಾದ ಮತ್ತು ಕಾರ್ಯರೂಪಕ್ಕೆ ಇಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದು…..

ಅದಕ್ಕಾಗಿಯೇ ಮಾನವೀಯ ಮೌಲ್ಯಗಳ ಪುನರುತ್ಥಾನ ಇಂದು ಅತ್ಯಂತ ಅವಶ್ಯಕ. ಆ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸೋಣ ಎಂದು ಆಶಿಸುತ್ತಾ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

4 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

5 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

16 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago