ಅಂತಿಮ ಮತದಾರರ ಪಟ್ಟಿ ಪ್ರಕಟ: 9.05 ಲಕ್ಷ ಮತದಾರರು: ಜಿಲ್ಲೆಯಲ್ಲಿ ಯುವ ಮತದಾರರ ಹೆಚ್ಚಳ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ರ ಸಂಬಂಧ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲಾ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಈ ಕಛೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

ಪ್ರಸಕ್ತ 2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024 ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಯವರೆಗೆ ಕಾಣುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗೆಳಲ್ಲಿ ಮಾತು ಚಲಾವಣೆಗೆ ಅವಕಾಶ ದೊರೆಯಲಿದೆ ಎಂದರು.

*ಜಿಲ್ಲೆಯಲ್ಲಿ 9.05 ಲಕ್ಷ ಮತದಾರರು*

ಜಿಲ್ಲೆಯಲ್ಲಿ ಈಗ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 9,05,724 ಮತದಾರರು ಇದ್ದಾರೆ. ಇದರಲ್ಲಿ 4,46,918 ಪುರುಷ ಮತದಾರರು ಮತ್ತು 4,58,659 ಮಹಿಳಾ ಮತದಾರರು ಹಾಗೂ 147 ಇತರೆ ಮತದಾರರು ಇದ್ದಾರೆ.

ಒಟ್ಟು ಮತದಾರರ ಪೈಕಿ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕರು, 13,431 ವಿಶೇಷ ಚೇತನ ಮತದಾರರು ಹಾಗೂ 121 ಸೇವಾ ಮತದಾರರು ಇದ್ದಾರೆ ಎಂದರು.

*ಮಹಿಳಾ ಮತದಾರರು ಹೆಚ್ಚು*

ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ. ದೊಡ್ಡಬಳ್ಳಾಪುರದಲ್ಲಿ ಒಟ್ಟು 2,21,297 ಮತದಾರರಿದ್ದು, ಅದರಲ್ಲಿ 1,12,171 ಮಹಿಳಾ ಮತದಾರರು ಹಾಗೂ 1,09,125 ಪುರುಷ ಮತದಾರರಿದ್ದಾರೆ. ಹೊಸಕೋಟೆಯಲ್ಲಿ ಒಟ್ಟು 2,40,998 ಮತದಾರರಿದ್ದು, ಅದರಲ್ಲಿ 1,21,543 ಮಹಿಳೆ ಹಾಗೂ 1,19,434 ಪುರುಷ ಮತದಾರರು ಇದ್ದಾರೆ. ದೇವನಹಳ್ಳಿಯಲ್ಲಿ ಒಟ್ಟು 2,18,343 ಮತದಾರರಿದ್ದು, 1,10,457 ಮಹಿಳಾ ಹಾಗೂ 1,07,869 ಪುರುಷ ಮತದಾರರಿದ್ದಾರೆ. ನೆಲಮಂಗಲದಲ್ಲಿ 2,25,086 ಮತದಾರರ ಪೈಕಿ 1,14,488 ಮಹಿಳೆ ಹಾಗೂ 1,10,490 ಪುರುಷ ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಸಾವಿರ ಪುರುಷರಿಗೆ 1027 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1028, ಹೊಸಕೋಟೆಯಲ್ಲಿ 1018, ದೇವನಹಳ್ಳಿ 1024 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1037 ಲಿಂಗಾನುಪಾತ ಕಂಡುಬಂದಿದೆ.

*1141 ಮತಗಟ್ಟೆಗಳು*

ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು1141 ಮತಗಟ್ಟೆಗಳಿವೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 293 ಮತಗಟ್ಟೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 294, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276, ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 278 ಮತಗಟ್ಟೆಗಳಿದೆ.

*13,431ವಿಶೇಷಚೇತನ ಮತದಾರರು*

ಹೊಸಕೋಟೆ 3646, ದೇವನಹಳ್ಳಿ 3767 ಹಾಗೂ ದೊಡ್ಡಬಳ್ಳಾಪುರ 3399 ಹಾಗೂ ನೆಲಮಂಗಲದಲ್ಲಿ 2619 ಸೇರಿದಂತೆ ಒಟ್ಟು 12,624 ಮಂದಿ ವಿಶೇಷಚೇತನ ಮತದಾರರಿದ್ದಾರೆ. ಜತೆಗೆ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕ ಮತದಾರಿದ್ದಾರೆ. ಇನ್ನು ಸೇವಾ ಮತದಾರರು 128 ಮಂದಿ ಇದ್ದಾರೆ ಎಂದು ಮಾಹಿತಿ ನೀಡಿದರು.

*14,817 ಯುವ ಮತದಾರರು*

ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಮತದಾರರ ನೋಂದಣಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಂತಿಮ ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದೊಳಗಿನ 14,817 ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4173, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3808, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3886, ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2950 ಯುವ ಮತದಾರರಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ನಿರಂತರವಾಗಿ ನಡೆಯುತ್ತಿರುತ್ತದೆ. 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಚುನಾವಣಾ ಪ್ರಕ್ರಿಯೆಯು ಆಡಳಿತ ಯಂತ್ರಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪಾತ್ರವು ಕೂಡ ಮುಖ್ಯವಾಗಿದ್ದು ಸಹಕಾರ ಹಾಗೂ ಸಹಭಾಗಿತ್ವ ಇರಲಿ ಎಂದು ರಾಜಕೀಯ ಪಕ್ಷಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ(ಪ್ರಬಾರ) ಹೇಮಾವತಿ ಜೆ, ಚುನಾವಣಾ ಶಿರಸ್ತೇದಾರ್ ಪ್ರಸಾದ್, ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

30 minutes ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

12 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

13 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

13 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

16 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

23 hours ago