ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಡಾ.ಬಿ.ಆರ್.ಅಂಬೇಡ್ಕರ್ ಭವನ ಲೋಕಾರ್ಪಣೆ- ಗ್ರಾಮಸ್ಥರ ಆಕ್ರೋಶ

ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ತೂಬಗೆರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಸರ್ಕಾರದಿಂದ ಅನುಮೋದನೆಗೊಂಡಿದ್ದು, ಸದ್ಯ ನಿರ್ಮಾಣ ಹಂತದಲ್ಲಿ ಭವನ‌ ಇದೆ.

ನಿರ್ಮಿತಿ ಕೇಂದ್ರ ಗುತ್ತೆಗೆ ಪಡೆದು ಭವನ ನಿರ್ಮಾಣ ಮಾಡಲಾಗುತ್ತಿದೆ. ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ, ಗ್ರಾಮಸ್ಥರ ಗಮನಕ್ಕೆ ತರದೇ ಏಕಾಏಕಿ ಭವನ ಉದ್ಘಾಟನೆ ಮಾಡಲಾಗಿದೆ.

ಕಟ್ಟಡದ ಕಾಮಗಾರಿ ಶೇ.75ರಷ್ಟು ಮಾತ್ರ ಪೂರ್ಣಗೊಂಡಿದ್ದು, ಇನ್ನೂ ಕಾಂಪೌಂಡ್ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸುಣ್ಣ ಬಣ್ಣ ಬಳಿಯುವುದು, ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಸೂಕ್ತ ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರೆ ಕೆಲಸ ಕಾರ್ಯಗಳು ಬಾಕಿ ಇರುವಾಗಲೇ ಕಟ್ಟಡ ಉದ್ಘಾಟನೆ ಮಾಡಿರುವುದು ಊರಿನ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನ ಕಟ್ಟಡಕ್ಕೆ ಅದರದೇ ಆದ ಮಹತ್ವ, ಘನತೆ- ಗೌರವ ಇರುತ್ತದೆ. ಸರ್ಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಲೋಕಾರ್ಪಣೆ ಮಾಡಲಾಗಿದೆ ಎಂದು ಊರಿನ ಮುಖಂಡ ಉದಯ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಕಾಮಗಾರಿ ಪರಿಶೀಲಿಸಿ ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಘನತೆ, ಗೌರವ ತಂದುಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

3 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

4 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

17 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

17 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

18 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago