ದೊಡ್ಡಬಳ್ಳಾಪುರ, ತೂಬಗೆರೆ ಹಾಗೂ ಲಕ್ಷ್ಮೀದೇವಿಪುರ ಮಾರ್ಗವಾಗಿ ಸಂಚರಿಸುವ ಬಸ್ ಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಂಡಿರುವ ಗ್ರಾಮಸ್ಥರ ಮುಖದಲ್ಲಿ ಸಂತಸ ಎದ್ದು ಕಾಣುವಂತಾಗಿದೆ. ದೊಡ್ಡಬಳ್ಳಾಪುರದಿಂದ ತೂಬಗೆರೆಗೆ ಹೋಗುವ ಎಲ್ಲಾ ಬಸ್ ಗಳು ಹಾಡೋನಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದವು. ಲಕ್ಷ್ಮೀದೇವಿಪುರ ಗ್ರಾಮದ ಜನತೆ ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬಸ್ ಹಿಡಿಯಬೇಕಿತ್ತು. ಈ ಹಿನ್ನೆಲೆ ಗೀತಾ ಅಶೋಕ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಹಲವು ಬಾರಿ ಮನವಿಗಳನ್ನು ಕೊಟ್ಟಿದ್ದರಿಂದ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಬೆಳಗ್ಗೆ 8:30, ಮಧ್ಯಾಹ್ನ 12, ಸಂಜೆ 4 ಹಾಗೂ 7ಗಂಟೆ ಸಮಯದಲ್ಲಿ ಈ ಬಸ್ ಸಂಚರಿಸಲಿದೆ ಎಂದು ತಿಳಿದುಬಂದಿದೆ.
ಈ ಸಂದರ್ಭದಲ್ಲಿ ಅಧಿಕಾರಿಗಳು, ಮುದ್ದುಕೃಷ್ಣಪ್ಪ, ಹನುಮಂತರಾಯಪ್ಪ, ಪುರುಷೋತ್ತಮ, ಅಶೋಕ್ ಕುಮಾರ್, ನಟರಾಜ್, ಬಾಬು, ಶಿವಕುಮಾರ್, ಶಿವರಾಜ್, ಮುನಿರಾಜ್, ಕನಕರಾಜ್ ಸೇರಿದಂತೆ ಇತರರು ಇದ್ದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…