ಕೋಲಾರ: ಅಂಬಿಗರ ಚೌಡಯ್ಯ ಅವರು ಶೋಷಿತರ ಧ್ವನಿಯಾಗಿ ನೇರ, ನಿಷ್ಠುರ, ನಡೆ, ನುಡಿಗಳಿಂದ ಸಮಾಜದಲ್ಲಿನ ಅಸ್ಪೃಶ್ಯತೆ ಹಾಗೂ ಮೂಢನಂಬಿಕೆಯನ್ನು ಹೊಗಲಾಡಿಸಲು ಶ್ರಮಿಸಿದ ಮಹಾನ್ ವಚನಕಾರ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸರಳವಾಗಿ ನಡೆದ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಬಸವಣ್ಣನವರ ಹಾದಿಯಲ್ಲಿಯೇ ಕಾಯಕ ನಿಷ್ಠೆಯಿಂದ ಬಂದಿದ್ದಾರೆ. ಸಮಾಜಿಕವಾಗಿ ಬದಲಾವಣೆಯಾದರೆ ಮಾತ್ರವೇ ದೇಶದಲ್ಲಿ ರಾಮರಾಜ್ಯ ತರಲು ಸಾಧ್ಯವಾಗುತ್ತದೆ. ಜಾತಿ ಅಭಿಮಾನ ಇರಲಿ, ದುರಾಭಿಮಾನ ಬೇಡ, ಇಂತಹ ಮಹಾತ್ಮರ ಜಯಂತಿಯನ್ನು ಜಾತಿ ಆಧಾರದಲ್ಲಿ ತಾರತಮ್ಯ ಮಾಡದೇ ಎಲ್ಲಾ ವರ್ಗದವರು ಒಗ್ಗೂಡಿ ಆಚರಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಅಂಬಿಗರ ಚೌಡಯ್ಯನವರು ಕೇವಲ ಗಂಗಾಮತ ಸಮಾಜಕ್ಕೆ ಸೀಮಿತರಾದವರಲ್ಲ. ಇಡೀ ಮನುಕುಲಕ್ಕೆ ಮಾದರಿಯಾಗಿದ್ದಾರೆ. ಇಂಥವರ ವಿಚಾರಧಾರೆಗಳನ್ನು ಯುವಕರಿಗೆ ತಿಳಿಸಬೇಕಾಗಿದೆ ಸಮಾಜದ ಏಳಿಗೆಗೆ ಶಿಕ್ಷಣ ಅಗತ್ಯ ಪಾಲಕರು ಮಕ್ಕಳಿಗೆ ಶಿಕ್ಷಣ ನೀಡಬೇಕು ಯುವಕರು ಸಹ ಒಳ್ಳೆಯ ಗುಣ ಬೆಳೆಸಿಕೊಳ್ಳಬೇಕು ಅಂಬೇಡ್ಕರ್, ಬಸವಣ್ಣ, ಅಂಬಿಗರ ಚೌಡಯ್ಯ ಹಾದಿಯಲ್ಲಿ ಅವರ ಆಶಯಗಳನ್ನು ಮೈಗೂಡಿಸಿಕೊಂಡು ಒಗ್ಗಟ್ಟಿನಿಂದ ಸಾಗಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕೆ ವಿಭಾಗದ ಅಧ್ಯಕ್ಷ ಕೆ.ರಂಗನಾಥ್ ಮಾತನಾಡಿ ಹಿಂದಿನ ಕಾಲದಲ್ಲಿ ನದಿಯ ದಡವನ್ನು ದಾಟಲು ಯಾವುದೇ ಸೌಕರ್ಯಗಳಿರಲಿಲ್ಲ. ಅಂತಹ ಸಂದರ್ಭದಲ್ಲಿ ನದಿಯ ದಡವನ್ನು ಚೌಡಯ್ಯ ಸೇರಿಸುತ್ತಿದ್ದರು. ಅಂಬಿಗರು ನಂಬಿದವರ ಕೈಬಿಡುವುದಿಲ್ಲ ಅವತ್ತೇ ತೋರಿಸಿಕೊಟ್ಟಿದ್ದಾರೆ ಶರಣರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿಗೆ ಗೌರವ ಸಲ್ಲಿಸಿದಂತಾಗುತ್ತದೆ. 800 ವರ್ಷಗಳ ಹಿಂದೆ, 12ನೇ ಶತಮಾನದಲ್ಲಿ ಸಮಾನತೆಯ ತತ್ವವನ್ನು ಜಗತ್ತಿಗೆ ಸಾರಿದ್ದಾರೆ ಹಿಂದೆ ಸಿದ್ದರಾಮಯ್ಯ ಸರಕಾರವು ಅಂಬಿಗರ ಚೌಡಯ್ಯ ಜಯಂತಿಯನ್ನು ಜಾರಿಗೆ ತಂದಿದ್ದಾರೆ ಎಂಬುದು ಹೆಮ್ಮೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್.ಟಿ ಘಟಕದ ಅಧ್ಯಕ್ಷ ನಾಗರಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ಮುಖಂಡರಾದ ಲಾಲ್ ಬಹಾದ್ದೂರ್ ಶಾಸ್ತ್ರಿ, ಅರಹಳ್ಳಿ ವಿಜಯಕುಮಾರ್, ಶ್ರೀನಿವಾಸ್, ನಾಗೇಶ್, ಮಿಲ್ಟ್ರಿ ರಾಮಣ್ಣ, ಜೋಗಮಾಲ್ ಮುಂತಾದವರು ಇದ್ದರು
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…