ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ.
ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.