ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ
ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,
ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…