Categories: ಕೋಲಾರ

ಅಕ್ಕ ಸಮ್ಮೇಳನದಲ್ಲಿ ಜಿಲ್ಲೆಯ ಜಾನಪದ ಕಲಾವಿದ ಗೋ.ನಾ.ಸ್ವಾಮಿ ಭಾಗಿ

ಕೋಲಾರ: ತಾಲೂಕಿನ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು 12 ನೇ ವರ್ಷದ ಅಕ್ಕ ಸಮ್ಮೇಳನದಲ್ಲಿ ಕೋಲಾರ ಜಿಲ್ಲೆಯಿಂದ ಭಾಗವಹಿಸುತ್ತಿದ್ದಾರೆ

ವಿಶ್ವ ಕನ್ನಡ ಅಕ್ಕ ಸಮ್ಮೇಳನವು ಅಮೆರಿಕ ದೇಶದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್‌ ನಗರದಲ್ಲಿ ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್‌ 1ರಂದು ಮೂರು ದಿನಗಳ ಕಾಲ ನಡೆಯಲಿದ್ದು ಅಮೆರಿಕದಲ್ಲಿರುವ ಸುಮಾರು 42 ಕನ್ನಡ ಸಂಘಗಳು ಸೇರಿ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು ಜಿಲ್ಲೆಯ ಜಾನಪದ ಕಲಾವಿದ ಗೋ.ನಾ ಸ್ವಾಮಿ ಅವರು ಆ.31ರಂದು ಜಾನಪದ ಗಾಯನ ನಡೆಸಿಕೊಡಲಿದ್ದಾರೆ ಇವರೊಂದಿಗೆ ಕರ್ನಾಟಕದಿಂದ ಹೃದಯವಾಹಿನಿ ಬಳಗದ ಜಾನಪದ ಕಲಾವಿದರು ಸೇರಿದಂತೆ ಬೊಂಬೆ ಕುಣಿತ, ಕವಿಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹೊತ್ತು12 ಜನರ ತಂಡವು ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ,

ಅಕ್ಕ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು, ಫ್ಯಾಶನ್‌ ಶೋ, ಸಾಹಿತ್ಯ ಗೋಷ್ಠಿ, ನಾಡಿನ ವಿಶಿಷ್ಟ ಖಾದ್ಯಗಳ ಭೋಜನ ಹೆಸರಾಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು, ನಾಡಿನ ಪಾರಂಪರಿಕ ನೃತ್ಯ ಶೈಲಿಗಳಾದ ಡೊಳ್ಳು ಕುಣಿತ, ಯಕ್ಷಗಾನ ಪ್ರದರ್ಶನ, ಕನ್ನಡ ನಾಟಕಗಳ ಪ್ರದರ್ಶನ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಒಕ್ಕೂಟವು ಆಯೋಜಿಸಿದೆ ಅಕ್ಕ ಸಮ್ಮೇಳನಕ್ಕೆ ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಆಧ್ಯಾತ್ಮಿಕ ಕ್ಷೇತ್ರದ ಪ್ರಮುಖರು, ಚಿತ್ರ ತಾರೆಯರು, ಸಾಹಿತಿಗಳು, ಉದ್ಯಮಿಗಳು ಭಾಗವಹಿಸಲಿದ್ದಾರೆ,

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

12 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

22 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago