ಅಕ್ಟೋಬರ್ 01 ರಿಂದ ರಾಗಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ:ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂ. ಬೆಂಬಲ ಬೆಲೆ ನಿಗದಿ

ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅಕ್ಟೋಬರ್ 01 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರು ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರವು 2025-26 ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂ.ಗಳ ಬೆಲೆ ನಿಗದಿ ಪಡಿಸಿದೆ. ಅಕ್ಟೋಬರ್ 01 ರಿಂದ ಡಿಸೆಂಬರ್ 15 ರವರೆಗೆ ನೋಂದಣಿ ಪ್ರಕ್ರಿಯೆ ನಡೆಯಲಿದೆ. 2026 ಜನವರಿ 01 ರಿಂದ ಮಾರ್ಚ್ 31 ರ ಅವಧಿಯವರೆಗೆ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಏಜೆನ್ಸಿ ಆಗಿ ನೇಮಿಸಲಾಗಿದೆ. ನಿಗಮದ ಉಪ ಏಜೆನ್ಸಿಗಳು ಸಹಯೋಗದಲ್ಲಿ ನೋಂದಣಿ ಪ್ರಕ್ರಿಯೆ ಬಯೋಮೆಟ್ರಿಕ್ ಆಧಾರದಲ್ಲಿ ನಡೆಯುವುದರಿಂದ ಅವಶ್ಯಕತೆ ಇರುವ ಟೇಬಲ್, ಚೇರ್, ಕಂಪ್ಯೂಟರ್, ಸಿಬ್ಬಂದಿ, ವಿದ್ಯುತ್ ಸಂಪರ್ಕ, ಇಂಟರ್ನೆಟ್, ತೂಕದ ಯಂತ್ರ ವ್ಯವಸ್ಥೆ ಮಾಡಿ ಜೊತೆಗೆ ರೈತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಸ್ಥಳದಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರೈತರು ಬೆಳೆದಿರುವ ಆಹಾರ ಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಫ್ರೂಟ್ಸ್ ದತ್ತಾಂಶದಿಂದ ಮಾಹಿತಿಯನ್ನು ಪಡೆಯಲಾಗುತ್ತದೆ ಹಾಗಾಗಿ ನೋಂದಣಿಗೆ ಫ್ರೂಟ್ಸ್ ಐಡಿ ಕಡ್ಡಾಯವಾಗಿದ್ದು ಐಡಿ ಇಲ್ಲದ ರೈತರು ಕೃಷಿ ಇಲಾಖೆಯ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪ್ರೂಟ್ಸ್ ಐಡಿ ಪಡೆದು ನೋಂದಣಿ ಮಾಡಿಕೊಳ್ಳಿ ಎಂದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುಳಾ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಸಹಕಾರ ಸಂಘಗಳ ಉಪ ನಿಬಂಧಕರಾದ ಚಂದ್ರಶೇಖರ್, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ತನ್ವೀರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಅಬಿದಾ ಅಜುಂ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಗೋಪಾಲ ಕೃಷ್ಣ, ಜಿಲ್ಲಾ ಉಗ್ರಾಣ ಕೇಂದ್ರಗಳ ವ್ಯವಸ್ಥಾಪಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

*ರಾಗಿ ನೋಂದಣಿ ಕೇಂದ್ರಗಳು ತೆರೆಯುವ ಸ್ಥಳ*

*ನೆಲಮಂಗಲ*
1)ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕೆಂಪಲಿಂಗನಹಳ್ಳಿ ಕ್ರಾಸ್, ಕುಣಿಗಲ್ ರಸ್ತೆ, ನೆಲಮಂಗಲ ತಾಲ್ಲೂಕು.
2) ವ್ಯವಸಾಯ ಸೇವಾ ಸಹಕಾರ ಸಂಘ, ಕಲಾಲು ಘಟ್ಟ, ತ್ಯಾಮಗೊಂಡ್ಲು ಹೋಬಳಿ.
3)ವ್ಯವಸಾಯ ಸೇವಾ ಸಹಕಾರ ಸಂಘ, ದಾಬಾಸ್ ಪೇಟೆ, ಸೋಂಪುರ ಹೋಬಳಿ.

*ದೊಡ್ಡಬಳ್ಳಾಪುರ*
1)ರೈತ ಭವನ ಕೇಂದ್ರ, ಎಂಪಿಎಂಸಿ ಯಾರ್ಡ್, ದೊಡ್ಡಬಳ್ಳಾಪುರ.
2)ರೈತ ಸಂಪರ್ಕ ಕೇಂದ್ರ, ಸಾಸಲು ಹೋಬಳಿ.

*ದೇವನಹಳ್ಳಿ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ಕುರುಬರ ದೊಡ್ಡಿ ರಸ್ತೆ, ಚಿಕ್ಕಬಳ್ಳಾಪುರ ರಸ್ತೆ, ದೇವನಹಳ್ಳಿ.

*ಹೊಸಕೋಟೆ*
ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಅಕ್ಷರ ದಾಸೋಹ ಕೇಂದ್ರ, ವೀರಭದ್ರೇಶ್ವರ ರೈಸ್ ಮಿಲ್ ಕಾಂಪೌಂಡ್, ಮಾಲೂರು ರಸ್ತೆ, ಹೊಸಕೋಟೆ.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

3 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

6 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

23 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

23 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago