ಅಕ್ರಮವಾಗಿ ಎಸ್ಟಿ ಪ್ರಮಾಣಪತ್ರ ಹಾಗೂ ಅನ್ಯ ಸಮುದಾಯಗಳು ಎಸ್ಟಿ ಪಂಗಡಕ್ಕೆ ಸೇರ್ಪಡೆ ವಿರೋಧಿಸಿ ಡಿಸಿಗೆ ಮನವಿ

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-೧ ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಎಸ್ಟಿ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚನೆ ಹಾಗೂ ಅನ್ಯ ಸಮುದಾಯದವರನ್ನು ಎಸ್ಟಿ ಪಟ್ಟಿಗೆ ಸೇರಿಸಬಾರದು ಎಂದು ಒತ್ತಾಯಿಸಿ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಮನವಿ ನೀಡಿ ಒತ್ತಾಯಿಸಲಾಯಿತು

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಕೋಲಾರ ಜಿಲ್ಲೆಯ ಧರ್ಮದರ್ಶಿ ಮಾಲೂರು ಎನ್ ವೆಂಕಟರಾಮ್ ಮಾತನಾಡಿ ಹಿಂದುಳಿದ ವರ್ಗಗಳ ಪ್ರವರ್ಗ -೧ ರಲ್ಲಿನ ಜಾತಿ ಸಮುದಾಯಗಳು ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದು ಕೂಡಲೇ ನಿಲ್ಲಿಸಬೇಕು ಪ್ರಮಾಣ ಪತ್ರ ಕೊಟ್ಟವರ ಮತ್ತು ಪಡೆದವರ ಮೇಲೆ ಹೈಕೋರ್ಟ್ ಆದೇಶದಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ರಾಜ್ಯದಲ್ಲಿ ತಳವಾರ ಜಾತಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಹೊರಟಿದ್ದಾರೆ ಅದನ್ನು ಕೂಡಲೇ ನಿಲ್ಲಿಸಬೇಕು ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠವನ್ನು ಸ್ಥಾಪಿಸಿ ವಾಲ್ಮೀಕಿ ಜನಾಂಗದ ಸಾಂಸ್ಕೃತಿಕ ಆರ್ಥಿಕ ಶೈಕ್ಷಣಿಕ ಹಾಗೂ ರಾಜಕೀಯ ವಿಷಯಗಳ ಅಧ್ಯಯನಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಎಂ ಬಾಲಗೋವಿಂದ್ ಮಾತನಾಡಿ ರಾಜ್ಯದಲ್ಲಿ ಅಪೂರ್ಣಗೊಂಡ ವಾಲ್ಮೀಕಿ ಭವನಗಳಿಗೆ ಹಣ ಬಿಡುಗಡೆ ಮಾಡಬೇಕು ಬ್ಯಾಕ್ ಲಾಕ್ ಹುದ್ದೆಗಳನ್ನು ನೇಮಕ ಮಾಡಬೇಕು ವಾಲ್ಮೀಕಿ ಜನಾಂಗದ ಮೇಲೆ ನಿರಂತರ ದೌರ್ಜನ್ಯ ಕೊಲೆ ಅತ್ಯಾಚಾರ ಘಟನೆಗಳನ್ನು ತಡೆಗಟ್ಟಲು ವಿಶೇಷ ಕಾನೂನು ರೂಪಿಸಬೇಕು ಸಮುದಾಯದ ಬೇಡಿಕೆಗಳು ಕಾಲಮೀತಿಯಲ್ಲಿ ಈಡೇರಿಸದೆ ಹೋದರೆ ವಾಲ್ಮೀಕಿ ಜಯಂತಿಯನ್ನು ಬಹಿಷ್ಕಾರ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಗ್ರಾಪಂ ಸದಸ್ಯ ಕುಡುವನಹಳ್ಳಿ ಆನಂದ್, ಬೈರಂಡಹಳ್ಳಿ ನಾಗೇಶ್, ಕಲ್ಲಂಡೂರು ನಾರಾಯಣಸ್ವಾಮಿ, ಮಂಜುಳಾ ಶ್ರೀನಿವಾಸ್, ರವಿ, ಪ್ರದೀಪ್ ಕುಮಾರ್, ನವೀನ್ ಕುಮಾರ್, ಕಲ್ವ ರವೀಂದ್ರ, ರಮೇಶ್, ಮಹೇಶ್ ಕುಮಾರ್, ನಾಗರಾಜ್ ಮುಂತಾದವರು ಇದ್ದರು.

Leave a Reply

Your email address will not be published. Required fields are marked *

error: Content is protected !!