ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ, ಸುಮಾರು 29 ಕ್ವಿಂಟಾಲ್‌ಗೂ ಅಧಿಕ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ತಾಲೂಕಿನ ಮಿರ್ಜಾನ ಗ್ರಾಮದ ತಾರೀಬಾಗಿಲಿನಲ್ಲಿ ನಡೆದಿದೆ.
ಮಿರ್ಜಾನ ಗ್ರಾಮದ ತಾರೀಬಾಗಿಲ ನಿವಾಸಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಕುಮಟಾ ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಮಿರ್ಜಾನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಅಧಿಕಾರಿಗಳು ಗೋಡೌನ್ ಪರಿಶೀಲಿಸಿದಾಗ ಪ್ಲಾಸ್ಟಿಕ್ ಹಾಗೂ ಗೋಣಿ ಚೀಲಗಳಲ್ಲಿ ಅಕ್ಕಿಯನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಇದರಲ್ಲಿ ಒಟ್ಟು 29 ಕ್ವಿಂಟಲ್, 28 ಕೆ.ಜಿ, 780 ಗ್ರಾಂ ಅಕ್ಕಿ ಇರುವುದು ಖಚಿತವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಇರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಆರೋಪಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ,ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಟ್ಟಿದ್ದ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕುಮಟಾ ಪೊಲೀಸ್ ನಿರೀಕ್ಷಕರಿಗೆ ಪತ್ರ ಬರೆಯಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ಮುಂದಿನ ಆದೇಶದವರೆಗೆ ಸುರಕ್ಷಿತವಾಗಿಡಲು ಬಾಡ ರೈತ ಸೇವಾ ಸಹಕಾರಿ ಸಂಘದ ಪಿ.ಡಿ.ಎಸ್ ಸಗಟು ಗೋದಾಮಿಗೆ ಹಸ್ತಾಂತರಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…