ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ, ಸುಮಾರು 29 ಕ್ವಿಂಟಾಲ್‌ಗೂ ಅಧಿಕ ಅಕ್ಕಿಯನ್ನು ಜಪ್ತಿ ಮಾಡಿದ ಘಟನೆ ತಾಲೂಕಿನ ಮಿರ್ಜಾನ ಗ್ರಾಮದ ತಾರೀಬಾಗಿಲಿನಲ್ಲಿ ನಡೆದಿದೆ.

ಮಿರ್ಜಾನ ಗ್ರಾಮದ ತಾರೀಬಾಗಿಲ ನಿವಾಸಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಶನಿವಾರ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಕುಮಟಾ ತಹಶೀಲ್ದಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಆಹಾರ ನಿರೀಕ್ಷಕರು, ಕಂದಾಯ ನಿರೀಕ್ಷಕರು, ಮಿರ್ಜಾನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಅಧಿಕಾರಿಗಳು ಗೋಡೌನ್ ಪರಿಶೀಲಿಸಿದಾಗ ಪ್ಲಾಸ್ಟಿಕ್ ಹಾಗೂ ಗೋಣಿ ಚೀಲಗಳಲ್ಲಿ ಅಕ್ಕಿಯನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ. ಇದರಲ್ಲಿ ಒಟ್ಟು 29 ಕ್ವಿಂಟಲ್, 28 ಕೆ.ಜಿ, 780 ಗ್ರಾಂ ಅಕ್ಕಿ ಇರುವುದು ಖಚಿತವಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿ ಇರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಆರೋಪಿ ಮಹಮ್ಮದ್ ಗೌಸ್ ಮೈದಿನ್ ಸಾಬ ಆಗಾ,ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಟ್ಟಿದ್ದ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕುಮಟಾ ಪೊಲೀಸ್ ನಿರೀಕ್ಷಕರಿಗೆ ಪತ್ರ ಬರೆಯಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯನ್ನು ಮುಂದಿನ ಆದೇಶದವರೆಗೆ ಸುರಕ್ಷಿತವಾಗಿಡಲು ಬಾಡ ರೈತ ಸೇವಾ ಸಹಕಾರಿ ಸಂಘದ ಪಿ.ಡಿ.ಎಸ್ ಸಗಟು ಗೋದಾಮಿಗೆ ಹಸ್ತಾಂತರಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

3 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

4 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

16 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

16 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

17 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago