ಕೊಲ್ಕತ್ತದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಬಂಧನ ಮಾಡಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ 36ಲಕ್ಷ ರೂಪಾಯಿ ಮೌಲ್ಯದ 600ಗ್ರಾಂ ತೂಕದ ಚಿನ್ನದ ಬಿಸ್ಕತ್ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು. ಕೆಐಎಎಲ್ ಗೆ ಬಂದಿಳಿದ ಪ್ರಯಾಣಿಕನ ತಪಾಸಣೆ ವೇಳೆ ಚಿನ್ನ ಪತ್ತೆಯಾಗಿದೆ. ಸದ್ಯ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.