ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…