ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ತಾಲೂಕಿನ ಗುಂಜೂರು ಟೋಲ್ ಸಮೀಪದಲ್ಲಿ ನಡೆದಿದೆ.
ಹಿಂದೂಪುರದಿಂದ ಬೆಂಗಳೂರಿಗೆ ಸುಮಾರು ಎರಡು ಟನ್ ಗೋಮಾಂಸವನ್ನು ಆಂಧ್ರ ಮೂಲದ ಸರಕು ಸಾಗಣೆ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ವಾಹನವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…