ಜೋಳದ ಬೆಂಡಿನ ಮೂಟೆ ಹಾಗೂ ಟೊಮೆಟೊ ಬಾಕ್ಸ್ ಗಳನ್ನು ಅಡ್ಡ ಇಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯ 8 ಟನ್ ಗೋಮಾಂಸವನ್ನು ಸೆನ್ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮಿನಕನಗುರ್ಕಿ ಗ್ರಾಮದ ಬಳಿ ನಡೆದಿದೆ.
ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಗೋಮಾಂಸದ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಚಿಕ್ಕಬಳ್ಳಾಪುರ ಸೆನ್ ಪೊಲೀಸರು ಸುಮಾರು 16 ಕ್ಕೂ ಅಧಿಕ ಮೌಲ್ಯದ 8 ಟನ್ ಗೋಮಾಂಸವನ್ನು ತುಂಬಿದ ಮೂರು ವಾಹನಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ಮಾಹಿತಿ ನೀಡಿದ್ದಾರೆ.
ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿನಕನಗುರ್ಕಿ ಬಳಿ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಅಧಿಕಾರಿಗಳು ಬೆಂಗಳೂರಿನ ಶಿವಾಜಿನಗರಕ್ಕೆ ರವಾನೆಯಾಗುತ್ತಿದ್ದ ಅಕ್ರಮ ಗೋಮಾಂಸ ಮೂರು ಬುಲೆರೋ ವಾಹನಗಳಲ್ಲಿ ಹಿಡಿದು ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಹಿಂದೂಪುರ ಮೂಲದ ಆರೀಪ್, ಅಸೀಂ ಬಾಪಾ, ಶಿವಾಜಿನಗರ ಮೂಲದ ರನ್ ಮತ್ತು ನೂರುಲಾ ಶರೀಪ್ ಎಂದು ತಿಳದು ಬಂದಿದೆ.
ಸೆನ್ ಡಿವೈಎಸ್ಪಿ ರವಿಕುಮಾರ್, ಸೆನ್ ಇನ್ಸ್ಪೆಕ್ಟರ್ ಸೂರ್ಯಪ್ರಕಾಶ್, ಸೆನ್ ಪಿಎಸ್ಐ ಸರಸ್ವತಮ್ಮ, ಸೆನ್ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡಸಿಲಾಗಿದೆ.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…