Categories: ಕೊಡಗು

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ..: ಕೇರಳ ಮೂಲದ ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ

ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.

ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, ಹಾಗೂ ಶೋಭಾ ಲಾಮಾಣಿ, ಪಿಎಸ್‌ಐ, ಭಾಗಮಂಡಲ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ.

ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.  ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.

ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ 1)ಎನ್.ಜೆ.ಶಿವರಾಮ, 45 ವರ್ಷ, ಚೇತುಕಾಯ ಗ್ರಾಮ, ಕರಿಕೆ, 2) ಎಸ್.ರವಿ, 35 ವರ್ಷ, ಮಾಗಳಿ ಗ್ರಾಮ, ಪಿರಿಯಾಪಟ್ಟಣ, ಮತ್ತು 3) ಕೋಟಿ, 55 ವರ್ಷ, ದೊಡ್ಡಪುಲಿಕೋಟು, ಭಾಗಮಂಡಲ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago