ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಹೇಶ್ ಕುಮಾರ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಅನೂಪ್ ಮಾದಪ್ಪ, ಸಿಪಿಐ, ಮಡಿಕೇರಿ ಗ್ರಾಮಾಂತರ ವೃತ್ತ, ಹಾಗೂ ಶೋಭಾ ಲಾಮಾಣಿ, ಪಿಎಸ್‌ಐ, ಭಾಗಮಂಡಲ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ.
ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.
ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ 1)ಎನ್.ಜೆ.ಶಿವರಾಮ, 45 ವರ್ಷ, ಚೇತುಕಾಯ ಗ್ರಾಮ, ಕರಿಕೆ, 2) ಎಸ್.ರವಿ, 35 ವರ್ಷ, ಮಾಗಳಿ ಗ್ರಾಮ, ಪಿರಿಯಾಪಟ್ಟಣ, ಮತ್ತು 3) ಕೋಟಿ, 55 ವರ್ಷ, ದೊಡ್ಡಪುಲಿಕೋಟು, ಭಾಗಮಂಡಲ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಸದರಿ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿನಂದಿಸಿದ್ದಾರೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…