ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿದ್ದ 208 ಕ್ವಿಂಟಾಲ್ ಅಕ್ಕಿ, 8 ಕ್ವಿಂಟಾಲ್ ರಾಗಿಯನ್ನು ಆಹಾರ ಇಲಾಖೆಯವರು ವಶಕ್ಕೆ ಪಡೆದಿದ್ದಾರೆ.

ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಪ್ರಿಯದರ್ಶಿನಿ ಬಡಾವಣೆಯ ಗೋಡೌನ್ ನಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 208 ಕ್ವಿಂಟಾಲ್ ಪಡಿತರ ಅಕ್ಕಿ, ರಾಗಿಯನ್ನು ವಶಪಡಸಿಕೊಳ್ಳಾಲಾಗಿದೆ.

ಎಪಿಎಂಸಿ ಎದುರಿನ ಪಾಲನಜೋಗಿಹಳ್ಳಿ ಗ್ರಾಮದ 1ನೇ ಕ್ರಾಸ್ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಗೋಡೌನ್ ನಲ್ಲಿ ಕಾನೂನು ಬಾಹಿರವಾಗಿ ರಾಗಿ ಮತ್ತು ಅಕ್ಕಿಯನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿತ್ತು.

ಅಂಗಡಿ ಮಾಲೀಕ ಹರೀಶ್ ಎಂಬುವವರು ಬಡವರಿಗೆ ನೀಡಬೇಕಾಗದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಲಾಭಮಾಡಿಕೊಳ್ಳುವ ಉದ್ದೇಶದಿಂದ ಸರ್ಕಾರಕ್ಕೆ ದೋಖಾ ಮಾಡಲಾಗಿರುತ್ತದೆ ಎಂದು ಆಹಾರ ಇಲಾಖೆಯವರು ದೂರು ನೀಡಿದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಡಿತರ ಅಕ್ಕಿ ಮತ್ತು ರಾಗಿಯ ಅಕ್ರಮ ಸಂಗ್ರಹದ ಕುರಿತು ಆಹಾರ ಇಲಾಖೆಯ ಶಿರಸ್ತೆದಾರ್ ವರದಿ ನೀಡಿದ್ದಾರೆ. ಅಲ್ಲದೆ ಪೊಲೀಸ್ ಇಲಾಖೆಗೆ ದೂರು ನೀಡಿದ್ದು ಪೊಲೀಸರು ಕಾನೂನು ಕ್ರಮ ಜರುಗಿಸುತ್ತಿದ್ದಾರೆ. ಇಂತಹ ಸೋರಿಕೆಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕಲಾಗುವುದು ಎಂದು ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳ ತಿಳಿಸಿದ್ದಾರೆ..

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

4 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

8 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

9 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

10 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

12 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

15 hours ago