Categories: ಕೋಲಾರ

ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

ಕೋಲಾರ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡಿ ಬಡ ರೈತ ಕೂಲಿಕಾರ್ಮಿಕರನ್ನು ರಕ್ಷಣೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಾದ್ಯಂತ ಗ್ರಾಮೀಣ ಪ್ರದೇಶದ ದಿನಸಿ ಅಂಗಡಿಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಡಾಬಾಗಳಲ್ಲಿ ದಿನದ 24 ಗಂಟೆ ಮದ್ಯ ಮಾರಾಟ
ನಿರಂತರವಾಗಿ ನಡೆಯುತ್ತಿದ್ದರೂ ಕ್ರಮಕೈಗೊಳ್ಳಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ನೆಪ
ಮಾತ್ರಕ್ಕೆ ದಾಳಿ ಮಾಡಿ ಕೆಲಸಕ್ಕೆ ಬಾರದ ಕೇಸ್‌ ಹಾಕಿ
ಕೈತೊಳೆದುಕೊಳ್ಳುತ್ತಿದ್ದಾರೆಂದು ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಅಕ್ರಮ ಮದ್ಯ ಮಾರಾಟದ ಬಗ್ಗೆ ದಾಖಲೆಗಳ ಸಮೇತ ವಿವರಿಸಿದರು.

ಸರ್ಕಾರ ನಡೆಯಬೇಕಾದರೆ ಹಣದ ಮೂಲಗಳು ಬೇಕು. ಹಣದ ಮೂಲಗಳು ಬೇಕಾದರೆ ಜಿಲ್ಲೆಯ ಅಬಕಾರಿ ವ್ಯಾಪಾರ ಹೆಚ್ಚಾಗಬೇಕು. ವ್ಯಾಪಾರ ಹೆಚ್ಚಾಗಬೇಕಾದರೆ ಅಕ್ರಮವಾಗಿ ಮದ್ಯಮಾರಾಟಕ್ಕೆ ಅವಕಾಶ ನೀಡಬೇಕು. ಇದರಿಂದ ಅಬಕಾರಿ ಆದಾಯ ಹೆಚ್ಚಾಗಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿ ಬೆಳಗ್ಗೆಯಿಂದ ಸಂಜೆಯವರೆಗೆ ಕಷ್ಟಪಟ್ಟ ಹಣವನ್ನು ಹೆಂಡತಿ ಮಕ್ಕಳ ಕಡೆ ತಿರುಗಿ ನೋಡದ ಮದ್ಯ ವ್ಯಸನಿಗಳು ಸಂಜೆ ವೇಳೆ ಅಬಕಾರಿ ಅಂಗಡಿಗೆ ದುಡಿದ ಹಣವನ್ನು ಇಟ್ಟು ಖಾಲಿ ಕೈಯಲ್ಲಿ ಮನೆಗೆ ಬಂದು ಹೆಂಡತಿ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿ ಕೊಲೆಗಳು ನಡೆದಿರುವ ಮಟ್ಟಕ್ಕೆ ಅಬಕಾರಿ ಪ್ರಕರಣಗಳು ಸಂಭವಿಸುತ್ತಿದ್ದರೂ ವಾಸ್ತವಾಂಶವನ್ನು ಸರ್ಕಾರಕ್ಕೆ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಲಿ ಕಾರ್ಮಿಕ ರೈತ ಮಹಿಳೆ ಶೈಲಜಾ ಮಾತನಾಡಿ, ಜಿಲ್ಲೆಯ ಜನಪ್ರತಿನಿಧಿಗಳು ವಿಧಾನಸೌಧ
ಹಾಗೂ ಜಿಲ್ಲೆಯ ಕೆಡಿಪಿ ಸಭೆಗಳಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ರಾಜಾರೋಷದ ಮಾತುಗಳನ್ನು ಹೇಳಿ ಆನಂತರ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದೆ
ಮೌನವಾಗಿರುವುದಕ್ಕೆ ಕಾರಣವೇನು. ಅಲ್ಲಿದ್ದ ಧ್ವನಿ ಇಲ್ಲಿ ಎಲ್ಲಿ ಹೋಯಿತು ಡಾಬಾಗಳಲ್ಲಿ ನಿರಂತರವಾಗಿ ಮಾರಾಟವಾಗುತ್ತಿರುವ ದಂಧೆ ನಿಯಂತ್ರಿಸುವ ಅಧಿಕಾರಿಗಳ ಮೇಲೆ ರಾಜಕಾರಣಿಗಳ ಒತ್ತಡವೇ ಎಂದು ಆಯುಕ್ತರನ್ನು ಪ್ರಶ್ನೆ ಮಾಡಿದರು.

ಕೂಲಿ ಮಾಡಿ ಹಾಗೂ ಖಾಸಗಿ ಸಾಲ ಪಡೆದು ಮಕ್ಕಳ ವಿದ್ಯಾಭ್ಯಾಸ ಹಿರಿಯ ಆರೋಗ್ಯಕ್ಕೆ ಹಣ ಕೂಡಿಟ್ಟರೆ ಕೆಲಸ ಕಾರ್ಯ ಮಾಡದ ಕುಡಿತಕ್ಕೆ ದಾಸರಾಗಿರುವ ಮನೆಯ ಯಜಮಾನರು ಕೂಲಿ ಹಣವನ್ನು ಸಾಲದ ಹಣವನ್ನು ಕಿತ್ತುಕೊಳ್ಳುವ ಜೊತೆಗೆ ಸರ್ಕಾರದಿಂದ ಉಚಿತವಾಗಿ ನೀಡುವ 2 ಸಾವಿರ, 3 ಕೆಜಿ ಅಕ್ಕಿ ಸಹ ಕಾಳಸಂತೆಯಲ್ಲಿ ಮಾರಾಟ ಮಾಡಿ ಕುಡಿದು ಬಂದು ಕುಟುಂಬದ
ಮರ್ಯಾದೆಯನ್ನು ತೆಗೆಯುತ್ತಿರುವ ಮದ್ಯವ್ಯಸನಿಗಳಿಂದ ಮಧ್ಯಮ ವರ್ಗದ ಕುಟುಂಬಗಳು ಉಳಿಯಬೇಕಾದರೆ ಸರ್ಕಾರ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧ ಮಾಡಿ ತಮ್ಮ ತಾಕತ್ತು ತೋರಿಸಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಬಕಾರಿ ಆಯುಕ್ತರು, ಹೊಸದಾಗಿ ಜಿಲ್ಲೆಗೆ ಬಂದಿದ್ದೇನೆ.
ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಅಕ್ರಮ ಮದ್ಯ ಮಾರಾಟ ತಡೆ ಮಾಡುವ ಭರವಸೆ
ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೌರಮ್ಮ, ವೆಂಕಟಮ್ಮ, ಮುನಿರತ್ನ, ಶೋಭ, ರತ್ನಮ್ಮ, ಭಾಗ್ಯಮ್ಮ, ತುಳಸಮ್ಮ ಮುಂತಾದವರಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

6 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

8 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

11 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

12 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

14 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

15 hours ago