ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತು ಕಡಿತ- ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ.ಪಾಟೀಲ್

 

ಇನ್ಮುಂದೆ ಗ್ರಾಮದಲ್ಲಿ ಅಕ್ರಮ‌ ಮದ್ಯ ಮಾರಾಟ ಮಾಡಿದರೆ ಸರ್ಕಾರಿ‌‌ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ಹಳೇಕೋಟೆ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಜೂನ್.7ರಂದು ಊರಿನ ಗ್ರಾಮದ ಯುವಕರು ನಗರದ ಅಬಕಾರಿ ನಿರೀಕ್ಷಕರ ಕಚೇರಿಗೆ ಮನವಿ ಸಲ್ಲಿಸಿದ್ದರು ಈ ಹಿನ್ನೆಲೆ ಇಂದು ಗ್ರಾಮದಲ್ಲಿ ಜಾಗೃತಿ ಸಭೆ ನಡೆಸಿ ಮಾತನಾಡಿದ ಅವರು, ಕುಡಿದು ಗ್ರಾಮದಲ್ಲಿ ಅಶಾಂತಿ, ಜನರ ನೆಮ್ಮದಿ ಹಾಳು‌ ಮಾಡುವಂತಹ ಕೆಲಸ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸವಾಗಿದ್ದು 7 ರಿಂದ 8 ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ, ಈ ಮದ್ಯ ಮಾರಾಟಗಾರರಲ್ಲಿ ಶಿಕ್ಷಕರೂ ಇರುವುದು ವಿಪರ್ಯಾಸ, ಮನೆಗಳಲ್ಲಿ ಪೆಟ್ಟಿ‌ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು‌ ಎಂದು ಸೂಚಿಸಿದರು.

ಈ ವೇಳೆ ಅಬಕಾರಿ ಸಿಬ್ಬಂದಿ ಹನುಮಂತರಾಜು, ಗ್ರಾಮ ಪಂಚಾಯತ್ ಸದಸ್ಯ ಹನುಮಂತರಾಜು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

12 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

17 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

20 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago