ಅಕ್ರಮ ಮರಳು-ಮಣ್ಣು ಲೂಟಿಕೋರರಿಂದ ಬರಿದಾದ ಗೂಳ್ಯ ನಂದಿಗುಂದ ಕೆರೆ: ಪ್ರತಿ ದಿನ 150ಲೋಡ್ ಸಾಗಾಟ: ಒಂದು ಲೋಡ್ ಗೆ 1500ರೂ.ಗೆ ಮಾರಾಟ

ಈ ವರ್ಷ ಮಳೆ ಕೊರತೆಯಿಂದಾಗಿ ತಾಲೂಕಿನ ಕೆಲ ಕೆರೆಗಳ ಒಡಲಿನಲ್ಲಿ ನೀರಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಮರಳು-ಮಣ್ಣು ದಂಧೆಕೋರರು ಕೆರೆಗಳ ಒಡಲನ್ನು ಜೆಸಿಬಿ, ಹಿಟಾಚಿಗಳ ಮೂಲಕ ಬಗೆದು ಅಕ್ರಮವಾಗಿ ಮರಳು-ಮಣ್ಣು ಸಾಗಿಸಿ ಅಟ್ಟಹಾಸ ಮೆರೆಯುತ್ತಿದ್ದಾರೆ.

ತಾಲೂಕಿನ ತೂಬಗೆರೆ ಹೋಬಳಿಯ ಗೂಳ್ಯ ನಂದಿಗುಂದ ಗ್ರಾಮಕ್ಕೆ ಸೇರಿದ ಸರ್ವೇ ನಂಬರ್ 61‌ರ ಸರ್ಕಾರಿ ಕೆರೆಯಲ್ಲಿ ತಾಲೂಕು ಆಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖಾ ವತಿಯಿಂದ ಅಪ್ಪಣೆ ಇಲ್ಲದೆ ರಾಜಾರೋಷವಾಗಿ ಮಣ್ಣು-ಮರಳು ದಂಧೆ ನಡೆಯುತ್ತಿದೆ. ಕೆರೆಯ ಒಡಲಲ್ಲಿ ಜೆಸಿಬಿ ಮೂಲಕ 5ರಿಂದ 10ಅಡಿಗಳಷ್ಟು ಬಗೆದು ಕೆರೆಯನ್ನು ಬರಿದು ಮಾಡಲಾಗುತ್ತಿದೆ.

ಕೆರೆಯಿಂದ ಒಂದು ದಿನಕ್ಕೆ 100-150 ಲೋಡ್ ಮಣ್ಣು-ಮರಳುನ್ನು‌ ಸಾಗಿಸಲಾಗುತ್ತದೆ. ಒಂದು ಲೋಡ್ ನ್ನು 1000-1500ಕ್ಕೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಎಷ್ಟೇ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಲಿಲ್ಲ. ನಾವು ನಮ್ಮ ಹೊಲ ಗದ್ದೆಗಳಿಗೆ ಹೋಗಲು ರಸ್ತೆಯೇ ಇಲ್ಲದಂತಾಗಿದೆ ಎಂದು ಯುವ ರೈತ ಚೇತನ್ ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯಲ್ಲಿ ಅಡಿಗಳುಗಟ್ಟಲೇ ಆಳ ಇಟ್ಟು ಮಣ್ಣನ್ನ ಹೊರತೆಗೆದಿದ್ದಾರೆ. ಒಂದು ವೇಳೆ ಮಳೆ ಬಂದು ಕೆರೆ ತುಂಬಿದರೆ ಈ ಗುಂಡಿಗಳು ಕಾಣಿಸೋದಿಲ್ಲ. ಊರಿನ ಯುವಕರು ಮೀನು ಹಿಡಿಯಲು, ಈಜು ಆಡಲು ಬಂದು ಈ ಗುಂಡಿಗಳಲ್ಲಿ ಬಿದ್ದು ಸಾವನ್ನಪ್ಪಿದರೆ ಯಾರು ಹೊಣೆ. ದನಕರುಗಳು ನೀರು ಕುಡಿಯಲು ಬಂದು ಕಾಲು ಜಾರಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು‌ ಹೇಳಿದರು.

ಕೆರೆಯ ಮರಳು-ಮಣ್ಣನ್ನು ಖಾಸಗಿ ಬಡಾವಣೆಗಳನ್ನು ನಿರ್ಮಿಸಲು ಹಾಗೂ ಖಾಸಗಿ ಜಮೀನುಗಳಲ್ಲಿನ ಹಳ್ಳಕೊಳ್ಳ ಮುಚ್ಚಲು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಕೂಡಲೇ ಸ್ಥಳ ಪರಿಶೀಲನೆ ಮಾಡಿ, ಅಕ್ರಮವಾಗಿ ಮರಳು-ಮಣ್ಣು ದಂಧೆಕೋರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ, ಈ ದಂಧೆಗೆ ಕಡಿವಾಣ ಹಾಕಬೇಕು. ಮುಂದಿನ ಪೀಳಿಗೆಗೆ ಕೆರೆಯನ್ನು ಉಳಿಸಿ, ಬೆಳಸಬೇಕು ಎಂದು ಪ್ರಜಾ ವಿಮೋಚನಾ ಸಮಿತಿ ತಹಶಿಲ್ದಾರ್ ಕಚೇರಿಗೆ ಲಿಖಿತ ರೂಪದಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

4 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

16 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

20 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

23 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago