ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಕ್ರಮ ವಹಿಸಿ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬಾಲ್ಯವಿವಾಹವು ಅನಾದಿ ಕಾಲದಿಂದ ನಡೆದು ಬಂದ ಅನಿಷ್ಟ ಪದ್ಧತಿಯಾಗಿದ್ದು, ಇದು 21ನೇ ಶತಮಾನದಲ್ಲೂ ಆಚರಣೆಯಲ್ಲಿರುವುದು ಶೋಚನೀಯ ಸಂಗತಿ.

ಏಪ್ರಿಲ್ 30 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ದಿನವಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆ ಹೆಚ್ಚಿದ್ದು,ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಬಸವರಾಜು ಎ ಬಿ ತಿಳಿಸಿದ್ದಾರೆ.

ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದೊಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರು ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಿ.

ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016 ಪ್ರಕಾರ ಈ ಮದುವೆಯನ್ನು ಏರ್ಪಡಿಸಿದ ಪೋಷಕರು ಅಥವಾ ಪಾಲಕರು, 18 ವರ್ಷದೊಳಗಿನ ಹುಡುಗಿಯನ್ನು ಮದುವೆಯಾಗುವ ವಯಸ್ಕ ವ್ಯಕ್ತಿ ಮತ್ತು ಮದುವೆಯಲ್ಲಿ ಭಾಗವಹಿಸುವ ಎಲ್ಲಾ ರೀತಿಯಲ್ಲಿ ಸಹಕರಿಸಿದ ಕುಟುಂಬಸ್ಥರನ್ನು ಸಹ ತಪ್ಪಿತಸ್ಥರು ಎಂದು ಇವರುಗಳಿಗೆ ಮೇಲೆ ತಿಳಿಸಿದ ಕಾಯ್ದೆಯ ಪ್ರಕಾರ ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳ ಕಾಲ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವರೆಡರಿಂದಲು ಶಿಕ್ಷೆಗೆ ಒಳಪಡುತ್ತಾರೆ. ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡಲು ಅವಕಾಶವಿರುತ್ತದೆ.ಅದೇ ರೀತಿ ಇದು ಕೇವಲ ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಾಗದೇ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ.

ಬಾಲ್ಯವಿವಾಹ ನಿಷೇಧಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಬರುವ ಧಾರ್ಮಿಕ ಸ್ಥಳಗಳಲ್ಲಿ ಮತ್ತು ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕ ಅಥವಾ ವೈಯಕ್ತಿಕ ವಿವಾಹದಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕು.

ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

6 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

8 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

11 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

12 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

14 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

15 hours ago