ಮೇ 10 ರಂದು ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಾಗಿದ್ದು, ಇಂತಹ ವಿವಾಹಗಳಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಯೂ ಸಹ ಹೆಚ್ಚಿರುತ್ತದೆ. ಈಗಾಗಲೇ ಶಾಲೆ ಬಿಟ್ಟ ಮಕ್ಕಳ ಅನುಸರಣೆ ಮಾಡಿ ಬಾಲ್ಯವಿವಾಹಕ್ಕೆ ಒಳಗಾಗದಂತೆ ಸೂಕ್ತ ಕ್ರಮಕೈಗೊಳ್ಳುವುದು. ಈ ಸಮಯದಲ್ಲಿ ಯಾವುದೇ ಬಾಲ್ಯವಿವಾಹಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಬೇಕು.
ಜಿಲ್ಲೆಯ ಸಾಮೂಹಿಕ ವಿವಾಹಗಳು ನಡೆಯಲು ಸಾಧ್ಯತೆಗಳಿರುವಂತಹ ಪ್ರಸಿದ್ದ ದೇವಸ್ಥಾನಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ, ಮಧುರೆ ದೇವಸ್ಥಾನ, ನೆಲಮಂಗಲ ತಾಲ್ಲೂಕಿನ ಶಿವಗಂಗೆ, ದೇವಹಳ್ಳಿ ತಾಲ್ಲೂಕಿನ ತಿಮ್ಮರಾಯಸ್ವಾಮಿ ಬೆಟ್ಟ(ಅವತಿ) ಹಾಗೂ ಹೊಸಕೋಟೆ ತಾಲ್ಲೂಕಿನ ಶ್ರೀ ಕಾಳಬೈರವ ದೇವಸ್ಥಾನ ಜಡಿಗೇನಹಳ್ಳಿ, ಅನುಗೊಂಡನಹಳ್ಳಿಯ ಮದ್ದೂರಮ್ಮ ದೇವಸ್ಥಾನದ ಮುಖ್ಯಸ್ಥರಿಗೆ ಸಾಮೂಹಿಕ ವಿವಾಹಗಳಲ್ಲಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಯಾವುದೇ ಬಾಲ್ಯವಿವಾಹಗಳಿಗೆ ಅವಕಾಶ ಮಾಡಿಕೊಡಬಾರದೆಂದು ಬಾಲ್ಯವಿವಾಹ ಕಾಯ್ದೆಯ ಕುರಿತು ಅವರಿಗೆ ತಿಳಿಸಿ, ಅರಿವು ಮೂಡಿಸಬೇಕು.
ಎಲ್ಲಾ ವೃತ್ತದ ಮೇಲ್ವಿಚಾರಿಕಿಯವರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಯಾ ಗ್ರಾಮಗಳಲ್ಲಿ ಬಾಲ್ಯವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…